HEALTH TIPS

ನೈಜೀರಿಯಾದಲ್ಲಿ ಐಸಿಸ್‌ ನ ಎರಡನೇ ಕಮಾಂಡರ್ ಹತ್ಯೆ: ಡೊನಾಲ್ಡ್ ಟ್ರಂಪ್ ಹೇಳಿಕೆ

 ವಾಷಿಂಗ್ಟನ್: ನೈಜೀರಿಯಾದಲ್ಲಿ ಅಮೆರಿಕ ಮತ್ತು ನೈಜೀರಿಯಾ ಸಶಸ್ತ್ರ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಐಸಿಸ್‌ ನ ಜಾಗತಿಕ ಮಟ್ಟದ ಎರಡನೇ ಪ್ರಮುಖ ಕಮಾಂಡರ್ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. 


ಶುಕ್ರವಾರ 'ಟ್ರೂತ್ ಸೋಷಿಯಲ್' ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, "ನನ್ನ ನಿರ್ದೇಶನದ ಮೇರೆಗೆ ಅಮೆರಿಕದ ಪಡೆಗಳು ಹಾಗೂ ನೈಜೀರಿಯಾ ಸಶಸ್ತ್ರ ಪಡೆಗಳು ಅತ್ಯಂತ ನಿಖರವಾಗಿ ರೂಪಿಸಲಾದ ಮತ್ತು ಸಂಕೀರ್ಣ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿವೆ. ಜಗತ್ತಿನ ಅತ್ಯಂತ ಸಕ್ರಿಯ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಅಬು-ಬಿಲಾಲ್ ಅಲ್-ಮಿನುಕಿ ಆಫ್ರಿಕಾದಲ್ಲಿ ಅಡಗಿಕೊಂಡಿದ್ದನು. ಆದರೆ ಅವನ ಚಟುವಟಿಕೆಗಳ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದ ಮೂಲಗಳು ಇದ್ದವು" ಎಂದು ಹೇಳಿದ್ದಾರೆ.

"ಅವನು ಇನ್ನು ಮುಂದೆ ಆಫ್ರಿಕಾದ ಜನರನ್ನು ಭಯಭೀತಗೊಳಿಸುವುದಿಲ್ಲ. ಅಮೆರಿಕನ್ನರನ್ನು ಗುರಿಯಾಗಿಸಿಕೊಂಡು ದಾಳಿಗಳ ಸಂಚು ರೂಪಿಸುವ ಕಾರ್ಯಾಚರಣೆಗಳಿಗೆ ಸಹಾಯ ಮಾಡುವುದೂ ಸಾಧ್ಯವಾಗುವುದಿಲ್ಲ. ಅವನ ಹತ್ಯೆಯಿಂದ ಐಸಿಸ್‌ನ ಜಾಗತಿಕ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ" ಎಂದು ಟ್ರಂಪ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಹಕಾರ ನೀಡಿದ ನೈಜೀರಿಯಾ ಸರಕಾರಕ್ಕೂ ಟ್ರಂಪ್ ಧನ್ಯವಾದ ತಿಳಿಸಿದ್ದಾರೆ.

"ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಕ್ಕೆ ನೈಜೀರಿಯಾ ಸರಕಾರಕ್ಕೆ ಧನ್ಯವಾದಗಳು. ದೇವರು ಅಮೆರಿಕವನ್ನು ಆಶೀರ್ವದಿಸಲಿ" ಎಂದು ಅವರು ಹೇಳಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries