HEALTH TIPS

ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರ: ಖರ್ಗೆ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ

 ನವದೆಹಲಿ: ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಚರ್ಚಿಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದಾರೆ. 


140 ಸದಸ್ಯ ಬಲದ ಕೇರಳಂ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದೇ ಪ್ರಕಟವಾಗಿದೆ.

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) 102 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಕಾಂಗ್ರೆಸ್‌ 63 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.

ಹೀಗಿದ್ದರೂ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್‌ಗೆ ಈವರೆಗೆ ಸಾಧ್ಯವಾಗಿಲ್ಲ.

ಕಳೆದ ಐದು ವರ್ಷಗಳಿಂದ ಹಾಗೂ ಚುನಾವಣೆಯಲ್ಲಿ ಯುಡಿಎಫ್‌ ಅನ್ನು ಮುನ್ನಡೆಸಿರುವ ವಿ.ಡಿ. ಸತೀಶನ್‌ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದ ಅವರಿಗೆ, ಮಿತ್ರ ಪಕ್ಷಗಳ ಬೆಂಬಲವೂ ಇದೆ. ಆದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮತ್ತು ಹಿರಿಯ ನಾಯಕ ರಮೇಶ್‌ ಚೆನ್ನಿತಲ ಅವರೂ ಪೈಪೋಟಿಗೆ ಇಳಿದಿದ್ದಾರೆ.

ಹೀಗಾಗಿ, ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries