ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ವಿಶೇಷ ಪ್ರಶಸ್ತಿಯನ್ನು ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು ಅವರಿಗೆ ನೀಡಲಾಯಿತು. ಕುಡಾಲುಮೇರ್ಕಳ ಸುಬ್ಬಯಕಟ್ಟೆ ಅನುದಾನಿತ ವಿದ್ಯಾಲಯದಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕøತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನಮಾಡಲಾಯಿತು. ಕರ್ನಾಟಕ ಸರ್ಕಾರದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿಮರದ, ಕರ್ನಾಟಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಮ್ ಶಹೀದ್ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯನಿರತ ಕನ್ನಡ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾಧ್ಯಕ್ಷ ಎ ಆರ್ ಸುಬ್ಬಯಕಟ್ಟೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವಿ ನಾಯ್ಕಾಪು, ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರಜೆ.ಎಸ್, ಪ್ರದೀಪ ಕುಮಾರ್ ಕಲ್ಕೂರ, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ. ಕೆ ಯು ಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
ಶ್ರೀಕಾಂತ ಕಾಸರಗೋಡು ಅವರು ಕೇರಳ ಸರಕಾರದ ವಾರ್ತಾ ಇಲಾಖೆಯ ಕಾಸರಗೋಡು ಜಿಲ್ಲಾ ಕೇಂದ್ರದ ಛಾಯಾಚಿತ್ರಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಂಚಾಲಕ, ಆಲ್ ಕೇರಳಾ ಫೆÇಟೊಗ್ರಾಫರ್ಸ್ ಅಸೋಸಿಯೇಶನ್ ಮಾಜಿ ಜಿಲ್ಲಾಧ್ಯಕ್ಷರಾಗಿದ್ದು ಪ್ರಸಕ್ತ ಈಸ್ಟ್ ಯುನಿಟ್ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


