ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದರು.
ಖಾನಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರಮಾಣವಚನ ಸ್ವೀಕರಿಸಿದರು.

