ಕಾಸರಗೋಡು: ಕೇರಳಾದ್ಯಂತ ಜೂ. 1ರಂದು ಶಾಲಾ ತರಗತಿ ಪುನಾರಂಭಗೊಳ್ಳಲಿದ್ದು, ಶಾಲಾ ಪ್ರವೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಾಲೆ ಎಂಬ ಹೆಗ್ಗಳಿಕೆಗೂ ಚೇಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲಾ ಪಂಚಾಯಿತಿ ಆಡಳಿತ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ನಡೆಯಲಿರುವುದು.

