HEALTH TIPS

ಕೊನೆಗೂ ಬೆಂಬಲ ನೀಡಿದ ವಿಸಿಕೆ: ವಿಜಯ್ 'ಸಿಎಂ' ಹಾದಿ ಸುಗಮ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್‌ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ವಿಸಿಕೆ ಬೇಷರತ್‌ ಬೆಂಬಲ ನೀಡಲಿದೆ ಎಂದು ಆ ಪಕ್ಷದ ಉನ್ನತ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ 'ದಿ ಹಿಂದೂ' ವರದಿ ಮಾಡಿದೆ.

ಪಕ್ಷದ ನಿಲುವಿನ ಬಗ್ಗೆ ಇರುವ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯಲು ಪಕ್ಷದ ಅಧ್ಯಕ್ಷ ತಿರುಮಾವಳವನ್ ಅವರು ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದಿದ್ದಾರೆ.

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ 2 ಸ್ಥಾನಗಳನ್ನು ಪಡೆದುಕೊಂಡಿದೆ. ಟಿವಿಕೆ 108 ಸ್ಥಾನಗಳನ್ನು ಪಡೆದುಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಸರ್ಕಾರ ರಚಿಸಲು 118 ಸ್ಥಾನಗಳ ಅಗತ್ಯವಿದೆ.

ಸತತ ಮೂರು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ವಿಜಯ್‌ ಅವರಿಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಹೇಳಿದ್ದರು.

5 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್‌ ಈಗಾಗಲೇ ಬೆಂಬಲ ಘೋಷಿಸಿದ್ದು, ಸಿಪಿಐ ಮತ್ತು ಸಿಪಿಐ(ಎಂ) ಕೂಡ ಬೆಂಬಲ ನೀಡುವುದಾಗಿ ಹೇಳಿವೆ. ಇದೀಗ ವಿಸಿಕೆಯು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries