HEALTH TIPS

ಸರ್ಕಾರ ರಚನೆ ಕಸರತ್ತು: ಕಾಂಗ್ರೆಸ್‌ ಬೆಂಬಲ ಕೋರಿದ ವಿಜಯ್‌

 ಚೆನ್ನೈ: 'ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್‌ ಅವರು ಕಾಂಗ್ರೆಸ್‌ನ ಬೆಂಬಲ ಕೋರಿದ್ದಾರೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದ್ದಾರೆ.



ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮಿಳುನಾಡಿನ ಜನಾದೇಶವು ಜಾತ್ಯತೀತ ಸರ್ಕಾರದ ಪರವಾಗಿದ್ದು, ಸಂವಿಧಾನವನ್ನು ರಕ್ಷಿಸಲು ಬದ್ಧವಾಗಿದೆ ಎಂಬುದು ಕಾಂಗ್ರೆಸ್‌ಗೆ ಸ್ಪಷ್ಟವಾಗಿದೆ.

ಬಿಜೆಪಿ ಮತ್ತು ಅದರ ಬೆಂಬಲಿಗರು ಸರ್ಕಾರ ರಚಿಸದಂತೆ ಮಾಡಲು ಕಾಂಗ್ರೆಸ್‌ ದೃಢನಿಶ್ಚಯ ಮಾಡಿದೆ' ಎಂದು ಅವರು ಹೇಳಿದ್ದಾರೆ.

'ರಾಜ್ಯದ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ವಿಜಯ್ ಅವರ ವಿನಂತಿಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಕಾಂಗ್ರೆಸ್ ನಾಯಕತ್ವವು ತಮಿಳುನಾಡು ಕಾಂಗ್ರೆಸ್ ಸಮಿತಿಗೆ ನಿರ್ದೇಶಿಸಿದೆ' ಎಂದು ಅವರು ಹೇಳಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನ ಪಡೆದುಕೊಂಡಿವೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries