ತಿರುವನಂತಪುರ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರು ಸತೀಶನ್ ಅವರಿಗೆ ಪ್ರತಿಜ್ಞಾವಿಧಿ ಬೊಧಿಸಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಯುಡಿಎಫ್ ಮೈತ್ರಿಕೂಟದ ನಾಯಕರು ಭಾಗವಹಿಸಿದ್ದರು.
ಇದೇ ವೇಳೆ ಸಚಿವರಾಗಿ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ.ಮುರಳೀಧರನ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಒಂದು ಸಾಲಿನಲ್ಲಿಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದು, ಯುಡಿಎಫ್ ಮೈತ್ರಿಕೂಟದ ಪ್ರಮುಖ ನಾಯಕರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.ಪ್ರಮುಖ ಸಂಗತಿಗಳು&buಟಟ; ವಿತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರು ವಿ.ಡಿ. ಸತೀಶನ್ ಅವರಿಗೆ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಬೋಧಿಸಿದರು.&buಟಟ; ಪ್ರಮುಖ ನಾಯಕರ ಭಾಗಿಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಯುಡಿಎಫ್ ಮೈತ್ರಿಕೂಟದ ಗಣ್ಯರು ಉಪಸ್ಥಿತರಿದ್ದರು.&buಟಟ; ಸಂಪುಟ ರಚನೆ ಮತ್ತು ಸಚಿವರು20 ಸದಸ್ಯರ ಸಂಪುಟದಲ್ಲಿ 14 ಹೊಸಬರಿಗೆ ಅವಕಾಶ ನೀಡಲಾಗಿದೆ. ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್ ಮತ್ತು ಕೆ. ಮುರಳೀಧರನ್ ಅವರು ಸಚಿವರಾಗಿ ಅಧಿಕಾರ ವಹಿಸಿಕೊಂಡರು.&buಟಟ; ವಿಧಾನಸಭೆ ಬಲಾಬಲ140 ಸದಸ್ಯ ಬಲದ ವಿಧಾನಸಭೆಯಲ್ಲಿ ಯುಡಿಎಫ್ ಮೈತ್ರಿಕೂಟವು 102 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ.&buಟಟ; ಮೈತ್ರಿಕೂಟದ ಪಾಲುದಾರಿಕೆಕಾಂಗ್ರೆಸ್ 63 ಸ್ಥಾನಗಳನ್ನು ಹೊಂದಿದ್ದರೆ, ಮಿತ್ರಪಕ್ಷಗಳಾದ ಐಯುಎಂಎಲ್ 22, ಕೆಇಸಿ 8 ಮತ್ತು ಆರ್‌ಎಸ್‌ಪಿ 3 ಕ್ಷೇತ್ರಗಳಲ್ಲಿ ಜಯಗಳಿಸಿವೆ.ಪ್ರಮುಖ ಅಂಕಿಅಂಶಗಳು140ಒಟ್ಟು ವಿಧಾನಸಭೆ ಸ್ಥಾನಗಳು102ಯುಡಿಎಫ್ ಗೆದ್ದ ಒಟ್ಟು ಸ್ಥಾನಗಳು20ಸಂಪುಟದ ಒಟ್ಟು ಸದಸ್ಯರು63ಕಾಂಗ್ರೆಸ್ ಪಕ್ಷದ ಶಾಸಕರ ಸಂಖ್ಯೆಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ
20 ಸದಸ್ಯರ ಸಂಪುಟದಲ್ಲಿ, ಇಬ್ಬರು ಮಹಿಳೆಯರು, ಇಬ್ಬರು ಪರಿಶಿಷ್ಟ ಸಮುದಾಯದವರು ಸೇರಿ ಮೊದಲ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 14 ಮಂದಿ ಇದ್ದಾರೆ. ಆರ್‌ಎಸ್‌ಪಿ ಮುಖಂಡ ಶಿಬು ಬೇಬಿ ಜಾನ್, ಕೇರಳ ಕಾಂಗ್ರೆಸ್ ಮುಖಂಡ ಮೋನ್ಸ್ ಜೋಸೆಫ್, ಅನೂಪ್ ಜೇಕಬ್ ಅವರಿಗೂ ಸಚಿವ ಸ್ಥಾನ ಲಭಿಸಿದೆ.
140 ಸದಸ್ಯ ಬಲದ ಕೇರಳಂ ವಿಧಾನಸಭೆಯಲ್ಲಿ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳಲ್ಲಿ ಗೆಲುವು ಗಳಿಸಿದೆ. ಈ ಪೈಕಿ ಕಾಂಗ್ರೆಸ್ 63 ಶಾಸಕರನ್ನು ಹೊಂದಿದೆ. ಮಿತ್ರಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 22, ಕೇರಳ ಕಾಂಗ್ರೆಸ್ (ಕೆಇಸಿ) ಎಂಟು ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ಮೂರು ಶಾಸಕರನ್ನು ಹೊಂದಿವೆ.

