HEALTH TIPS

ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ ಸಿಪಿಎಂ ಕಾರ್ಯಕರ್ತರ ದಾಳಿ

 ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಸಿಪಿಐ(ಎಂ) ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ತಿರುವನಂತಪುರದಲ್ಲಿರುವ ವಿಜಯನ್ ಬಾಡಿಗೆ ನಿವಾಸದ ಬಳಿ ಈ ದಾಳಿ ನಡೆದಿದೆ.


ಅಧಿಕಾರಿಗಳು ಪರಿಶೀಲನೆ ನಡೆಸಿ ಹಿಂದಿರುಗುತ್ತಿದ್ದಾಗ ಈ ಕೃತ್ಯ ನಡೆದಿದೆ.

ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಸೇರಿ ಮೂರು ವಾಹನಗಳ ಮೇಲೆ ದಾಳಿ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ವಾಹನಗಳಿಗೆ ಒದೆಯುವುದು, ಕಟ್ಟಿಗೆಯಿಂದ ಬಡಿಯುವುದು ಮತ್ತು ತಮ್ಮ ಬಲ ಪ್ರದರ್ಶನ ಮಾಡುವುದರಲ್ಲಿ ನಿರತರಾಗಿದ್ದರು ಎಂದು ವರದಿ ತಿಳಿಸಿದೆ.

ಇದಕ್ಕೂ ಮೊದಲು, ವಿಜಯನ್ ನಿವಾಸದ ಬಳಿ ನಿಲ್ಲಿಸಿದ್ದ ಇ.ಡಿ ವಾಹನಗಳ ಮೇಲೆ ಹೆಲ್ಮೆಟ್, ಪ್ಲಾಸ್ಟಿಕ್ ಬಾಟಲ್‌ಗಳು ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹರಸಾಹಸಪಡೆಬೇಕಾಯಿತು.

ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್(ಸಿಎಂಆರ್‌ಎಲ್‌) ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ ವಿಜಯನ್ ಅವರ ತಿರುವನಂತಪುರದ ಬಾಡಿಗೆ ಮನೆ ಸೇರಿ ಕೇರಳದ 10 ಕಡೆ ದಾಳಿ ನಡೆದಿದ್ದು, ಸ್ಥಳದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಎಂಬ ಖಾಸಗಿ ಕಂಪನಿಯು 2018 ರಿಂದ 2019ರ ಅವಧಿಯಲ್ಲಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಕಂಪನಿ ಎಕ್ಸಲಾಜಿಕ್ ಸಲ್ಯೂಷನ್ಸ್‌ಗೆ ₹1.72 ಕೋಟಿಯನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ, ವಿಜಯನ್ ಪುತ್ರಿಯ ಕಂಪನಿಯು ಸಿಎಂಆರ್‌ಎಲ್‌ಗೆ ಯಾವುದೇ ಸೇವೆ ನೀಡಿಲ್ಲ ಎಂದು ಇ.ಡಿ ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು, ಕಣ್ಣೂರು ಜಿಲ್ಲೆಯ ಪಿಣರಾಯಿ ಗ್ರಾಮದಲ್ಲಿರುವ ವಿಜಯನ್ ಅವರ ನಿವಾಸದ ಹೊರಗೆ ಜಮಾಯಿಸಿದ್ದ ಸಿಪಿಐ(ಎಂ) ಕಾರ್ಯಕರ್ತರು ಇ.ಡಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ಆರೋಪಿಸಿದ್ದರು.

ವಿಜಯನ್ ಮತ್ತು ಇತರರ ನಿವಾಸಗಳ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆರೋಪಿಸಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries