ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದೂ ಭರವಸೆ ನೀಡಿದೆ.
ಪಶ್ಚಿಮ ಏಶ್ಯ ಪರಿಸ್ಥಿತಿಗೆ ಸಂಬಂಧಿಸಿದಂತೆ ನಡೆದ ಅಂತರ್ ಸಚಿವಾಲಯಗಳ ವಿವರಣಾ ಸಭೆಯಲ್ಲಿ ಅಧಿಕಾರಿಗಳು ಮಾತನಾಡಿ, ಭಾರತದ ಬಳಿ ಸಾಕಷ್ಟು ಪ್ರಮಾಣದ ಇಂಧನ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು. ಪಶ್ಚಿಮ ಏಶ್ಯ ಪ್ರದೇಶದಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ಪರಿಣಾಮ ದೇಶದ ಇಂಧನ ಪೂರೈಕೆಯ ಮೇಲೆ ಬೀಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ ಮತ್ತು ತೈಲ ಸಂಸ್ಕರಣೆ), ದೇಶದಲ್ಲಿ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಹಾಗೂ ಕಚ್ಚಾ ತೈಲದ ಸಮರ್ಪಕ ದಾಸ್ತಾನು ಇದೆ ಎಂದು ಸ್ಪಷ್ಟಪಡಿಸಿದರು.
ಭಾರತದ ಸುಮಾರು ಶೇ.90ರಷ್ಟು ಇಂಧನ ಆಮದುಗಳು ಬಿಕ್ಕಟ್ಟಿಗೆ ಗುರಿಯಾಗಿರುವ ಪ್ರದೇಶಗಳಿಂದ ಬರುತ್ತವೆ. ಆದರೂ ಆಮದು ವ್ಯತ್ಯಯ ಉಂಟಾಗದಂತೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.
ದೇಶದ ಬಳಿಯಿರುವ ಇಂಧನ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿರುವುದರಿಂದ ಜನರು ಭಯಭೀತರಾಗಬೇಕಾದ ಅಗತ್ಯವಿಲ್ಲ. ಪ್ರಧಾನಿಯವರ ಕರೆ ಇಂಧನ ಉಳಿತಾಯಕ್ಕೆ ಉತ್ತೇಜನ ನೀಡುವ ಹಾಗೂ ಜಾಗತಿಕ ಅನಿಶ್ಚಿತತೆಯ ಸಂದರ್ಭದಲ್ಲಿ ದೇಶದ ಮೇಲಿನ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದರು.
'ದೇಶದಲ್ಲಿ ಯಾವುದೇ ಇಂಧನ ಕೊರತೆ ಇಲ್ಲ. ಪೂರೈಕೆಯ ಮೇಲೆ ಕನಿಷ್ಠ ಪ್ರಮಾಣದ ಪರಿಣಾಮವಾಗುವಂತೆ ತಡೆಯಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ' ಎಂದು ಅವರು ಹೇಳಿದರು.

