ನವದೆಹಲಿ (PTI): ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಮತ್ತು ಇತರ ಚುನಾವಣಾ ಆಯುಕ್ತರ (ಇಸಿ) ನೇಮಕಾತಿ ಕಾರ್ಯವಿಧಾನಗಳನ್ನು ನಿಯಂತ್ರಿಸಲು ಕಾನೂನು ರೂಪಿಸುವಂತೆ ಸಂಸತ್ತಿಗೆ ನ್ಯಾಯಾಲಯ ನಿರ್ದೇಶಿಸಬಹುದೇ ಎಂದು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿತು.
ಸಿಇಸಿ ಮತ್ತು ಇ.ಸಿಗಳ ನೇಮಕ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರಗಿಟ್ಟಿರುವ 2023ರ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ಈ ಹೇಳಿಕೆ ನೀಡಿದೆ.

