HEALTH TIPS

ಬಿಜೆಪಿ ಅಭೂತಪೂರ್ವ ಸಾಧನೆ: ಮತ ಎಣಿಕೆಗೂ ಮುನ್ನ ಸಚಿವ ಮೇಘವಾಲ್ ವಿಶ್ವಾಸ

ರಾಂಚಿ: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ ಎಂದು ಕೇಂದ್ರ ಕಾನೂನು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವರು ಭಾನುವಾರ ರಾಂಚಿಗೆ ಆಗಮಿಸಿದ್ದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದ್ದು ಫಲಿತಾಂಶ ನಮ್ಮ ಪರವಾಗಲಿದೆ ಎಂದು ಹೇಳಿದರು.

ಚುನಾವಣೆ ನಡೆದ ವಿವರ: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9 ರಂದು ಚುನಾವಣೆ ನಡೆದಿತ್ತು. ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ನಾಳೆ ( ಸೋಮವಾರ, ಮೇ 4) ಮತ ಎಣಿಕೆ ಕಾರ್ಯ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries