ಗಾಝಾ: ಮಧ್ಯ ಗಾಝಾದಲ್ಲಿ ರವಿವಾರ ಇಸ್ರೇಲ್‍ನ ದಾಳಿಯಲ್ಲಿ ಒಂದು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವುದಾಗಿ ಸ್ಥಳೀಯ ಆಸ್ಪತ್ರೆಯ ಮೂಲಗಳು ಹೇಳಿವೆ.
ರವಿವಾರ ಬೆಳಿಗ್ಗೆ ಅಲ್-ನುಸೀರಾತ್ ಶಿಬಿರ ಪ್ರದೇಶದ ವಸತಿ ಕಟ್ಟಡವನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ.
ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇತರ 10 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯ ಗಾಝಾದಲ್ಲಿ ಹಮಾಸ್‍ನ ಶಸ್ತ್ರಾಸ್ತ್ರ ಸಂಗ್ರಹಣಾ ವ್ಯವಸ್ಥೆಯನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ.

