HEALTH TIPS

ಹಾರ್ಮುಝ್ ಬಿಕ್ಕಟ್ಟು ಇತ್ಯರ್ಥಕ್ಕೆ ಅಮೆರಿಕ-ಇರಾನ್ ಒಪ್ಪಂದ ಸಾಧ್ಯತೆ

ಅಬುದಾಭಿ: ಹಾರ್ಮುಝ್ ಜಲಸಂಧಿಯನ್ನು ಹಂತಹಂತವಾಗಿ ಮತ್ತೆ ತೆರೆಯುವುದಕ್ಕೆ ಪ್ರತಿಯಾಗಿ ಇರಾನ್ ನೌಕೆಗಳ ಮೇಲಿನ ಅಮೆರಿಕದ ನಿರ್ಬಂಧಗಳನ್ನು ಸಡಿಲಗೊಳಿಸುವ ಕುರಿತ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಬಂದಿವೆ ಎಂದು ಅಲ್‌ಅರಬಿಯಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಮೆರಿಕ-ಇರಾನ್ ಯುದ್ಧ ಆರಂಭವಾದ ಬಳಿಕ ಇರಾನ್ ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿತ್ತು. ಇದರಿಂದ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಇದೀಗ ಜಲಸಂಧಿಯನ್ನು ಕ್ರಮೇಣ ತೆರೆಯುವುದಕ್ಕೆ ಪ್ರತಿಯಾಗಿ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಮುಂದಿನ ಕೆಲ ತಾಸುಗಳಲ್ಲಿ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳ ಬಿಡುಗಡೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ನೀಡಿದ ಹೇಳಿಕೆಯಲ್ಲಿ, ಇರಾನ್ ಜೊತೆಗಿನ ಒಪ್ಪಂದ ಅಂತಿಮಗೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು. ಮಾತುಕತೆಗಳು ಉತ್ತಮವಾಗಿ ಸಾಗುತ್ತಿದ್ದು, ಯುದ್ಧ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಹಾರ್ಮುಝ್ ಜಲಸಂಧಿಯಲ್ಲಿನ 'ಪ್ರಾಜೆಕ್ಟ್ ಫ್ರೀಡಂ' ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಘೋಷಣೆಯ ಸಂದರ್ಭದಲ್ಲೇ ಟ್ರಂಪ್ ಈ ಮಾಹಿತಿ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries