ಕಾಸರಗೋಡು: ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಲು ಯತ್ನಿಸಿದ ದೂರಿಗೆ ಸಂಬಂಧಿಸಿ ಪೆರಿಯದ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಜಯಪ್ರಕಾಶ್ ಎಂಬವರ ವಿರುದ್ಧ ಬೇಕಲ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
2024 ಜೂನ್ 19ರಂದು ಕೇಂದ್ರೀಯ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದ ಜಯಪ್ರಕಾಶ್ ಅಲ್ಲಿ ಕುರ್ಚಿಯಲ್ಲಿ ಕುಳಿತಿದ್ದ ತನ್ನ ಕೈಹಿಡಿದು ಕಿರುಕುಳ ನೀಡಲೆತ್ನಿಸಿರುವುದಾಗಿ ಪೋಲೀಸರಿಗೆ ನೀಡಿದ ದೂರಿನಲ್ಲಿ ಮಹಿಳಾ ಸಿಬ್ಬಂದಿ ತಿಳಿಸಿದ್ದಾರೆ.

