ಬದಿಯಡ್ಕ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಶುಕ್ರವಾರ ಮಧ್ಯಾಹ್ನ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಆಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಮುಲ್ಲಪ್ಪಳ್ಳಿ ಕೃಷ್ಣನ್ ನಂಬೂದಿರಿಯವರ ತಾಂತ್ರಿಕತ್ವದಲ್ಲಿ ಮಹಾ ಶ್ರೀಚಕ್ರ ನವಾವರಣ ಪೂಜೆ ನೆರವೇರಿತು. ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವ ಸಂಸ್ಥಾನಮ್ ಒಡಿಯೂರು ಇವರ ಉಪಸ್ಥಿತರಿದ್ದರು. ವಿದುಷಿ ಯನ್.ಜೆ. ನಂದಿನಿ ಮತ್ತು ಬಳಗದವರು ನವಾವರಣ ಕೃತಿ ಆಲಾಪನೆ ನಡೆಸಿಕೊಟ್ಟರು. ವಯಲಿನ್ನಲ್ಲಿ ವಿದ್ವಾನ್ ವಿಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ಆನೂರು ಅನಂತಕೃಷ್ಣ ಶರ್ಮಾ ಬೆಂಗಳೂರು, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ್ ಜೊತೆಗೂಡಿದರು.

.jpg)
