ನವದೆಹಲಿ (PTI): ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರದ ವೀಕ್ಷಕರಾಗಿ ನೇಮಿಸಿದೆ.
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಸಹ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಅಸ್ಸಾಂನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರನ್ನು ವೀಕ್ಷಕರನ್ನಾಗಿ ಮತ್ತು ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರನ್ನು ಸಹ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

