HEALTH TIPS

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಅಭಿಯಾನ

 ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಭಿಯಾನ ಪ್ರಾರಂಭಿಸಿದೆ. 


ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುವ ಆನ್‌ಲೈನ್ ಅರ್ಜಿಯನ್ನು ಬೆಂಬಲಿಸುವಂತೆ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ ನೀಡಿದ್ದಾರೆ.

'ಈಗ ಸ್ವಲ್ಪ ನೈಜ ಕೆಲಸ ಮಾಡುವ ಸಮಯ ಬಂದಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಅಭಿಯಾನ ಆರಂಭಿಸುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿವೆ' ಎಂದು ಅವರು ಹೇಳಿದ್ದಾರೆ.

'ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡುವ ಸಮಯ ಬಂದಿದೆ. 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ವ್ಯವಸ್ಥೆಯ ತಪ್ಪಿನಿಂದಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗಾಗಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ.

ಕೊಲೆ ಬೆದರಿಕೆ..

ಶಿಕ್ಷಣ ಸಚಿವರ ವಿರುದ್ಧದ ಅಭಿಯಾನದ ಬೆನ್ನಲ್ಲೇ ತಮ್ಮ ವಿರುದ್ಧ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅಭಿಜೀತ್ ದೀಪ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.

2 ಕೋಟಿ ದಾಟಿದ ಫಾಲೋವರ್ಸ್

ಏತನ್ಮಧ್ಯೆ ಇನ್‌ಸ್ಟಾಗ್ರಾಂನಲ್ಲಿ ಶುಕ್ರವಾರ ಕಾಕ್ರೋಚ್ ಜನತಾ ಪಾರ್ಟಿಯ ಫಾಲೋವರ್‌ಗಳ ಸಂಖ್ಯೆ ಎರಡು ಕೋಟಿ ದಾಟಿದೆ.

ಭಾರತದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಹೇರಿದ ಬೆನ್ನಲ್ಲೇ ಕಾಕ್ರೋಚ್ ಈಸ್ ಬ್ಯಾಕ್ ಎಂಬ ಹೊಸ ಎಕ್ಸ್ ಖಾತೆಯನ್ನು ತೆರೆಯಲಾಗಿತ್ತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries