ಚೆನ್ನೈ: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಹಕ್ಕು ಪತ್ರವನ್ನು ಮಂಡಿಸಿದೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಇಂದು(ಬುಧವಾರ) ಭೇಟಿಯಾಗಿರುವ ನಿಯೋಜಿತ ಮುಖ್ಯಮಂತ್ರಿ ವಿಜಯ್ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ನಾಳೆ(ಗುರುವಾರ) ನೆಹರೂ ಕ್ರೀಡಾಂಗಣದಲ್ಲಿ ಪ್ರಮಾಣವಚನ ನಡೆಯುವ ಸಾಧ್ಯತೆಯಿದೆ.
ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನ ಪಡೆದುಕೊಂಡಿವೆ.

