HEALTH TIPS

ಚುನಾವಣೋತ್ತರ ಹಿಂಸಾಚಾರ ಪ್ರಕರಣ| ವಾದ ಮಂಡಿಸಲು ವಕೀಲರ ಉಡುಪಿನಲ್ಲಿ ಕಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದ ಮಮತಾ ಬ್ಯಾನರ್ಜಿ

 ಕೋಲ್ಕತ್ತಾ: ಚುನಾವಣೋತ್ತರ ಹಿಂಸಾಚಾರ ಪ್ರಕರಣದಲ್ಲಿ ವಾದ ಮಂಡಿಸಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ವಕೀಲರ ಉಡುಪಿನಲ್ಲಿ ಕಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದರು. 


ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿಯ ಲೋಕಸಭಾ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಅವರ ಪುತ್ರ ಶಿರ್ಷಣ್ಯ ಬಂಡೋಪಾಧ್ಯಾಯ, ಬೈಸ್ವನೋರ್ ಚಟರ್ಜಿ ಅವರು ಸಾಥ್ ನೀಡಿದ್ದಾರೆ.

ಮೂಲಗಳ ಪ್ರಕಾರ, ತೃಣಮೂಲ ಕಾಂಗ್ರೆಸ್ ಸಲ್ಲಿಸಿರುವ ಚುನಾವಣೋತ್ತರ ಹಿಂಸಾಚಾರ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡಿಸಲಿದ್ದಾರೆ.

ಎಪ್ರಿಲ್ ಆರಂಭದಲ್ಲಿ, ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಲು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಪೀಠದ ಮುಂದೆ ಹಾಜರಾಗಿದ್ದರು. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಆಯೋಗವು ಪಶ್ಚಿಮ ಬಂಗಾಳವನ್ನು ಗುರಿಯಾಗಿಸುತ್ತಿದೆ ಎಂದು ಅವರು ಆರೋಪಿಸಿದ್ದರು.

ಇದಲ್ಲದೆ ಕಾಂಗ್ರೆಸ್ ನಲ್ಲಿದ್ದಾಗ ಮಮತಾ ಬ್ಯಾನರ್ಜಿ ಕನಿಷ್ಠ ಮೂರು ಪ್ರಕರಣಗಳಲ್ಲಿ ವಕೀಲರಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries