HEALTH TIPS

ಬಿಹಾರ: ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಘೋಷಣೆ

 ಪಟ್ನಾ: ಜೂನ್ 21ರಂದು ನಡೆಯಲಿರುವ ನೀಟ್-ಯುಜಿ-2026 ಮರು ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ನೀಡುವುದಾಗಿ ಬಿಹಾರ ಸರ್ಕಾರ ಶನಿವಾರ ಘೋಷಿಸಿದೆ.


'ಬಿಹಾರದಲ್ಲಿ ನೀಟ್ ಪರೀಕ್ಷೆಗೆ ಹಾಜರಾಗುವ ಎಲ್ಲಾ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ' ಎಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಪರೀಕ್ಷಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಚೌಧರಿ ಮನವಿ ಮಾಡಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದುಗೊಳಿಸಿತ್ತು. ‍ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ. ಇದರ ನಡುವೆ ಎನ್‌ಟಿಎ ಮರು ಪರೀಕ್ಷೆಯ ದಿನಾಂಕ ಘೋಷಿಸಿತ್ತು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries