HEALTH TIPS

ವರ್ಕ್‌ ಫ್ರಂ ಹೋಮ್‌ ಮಾತ್ರವಲ್ಲ, ಆನ್‌ಲೈನ್‌ನಲ್ಲೇ ತರಗತಿಗಳ ನಡೆಸಲು ಮೋದಿ ಸಲಹೆ

 ವಡೋದರಾ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಪೂರೈಕೆ ಸರಪಳಿಗೆ ಅಡ್ಡಿಯಾಗಿರುವುದರಿಂದ ತೈಲ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸಲು ಶಾಲೆಗಳಲ್ಲೂ ತಾತ್ಕಾಲಿಕವಾಗಿ ಆನ್‌ಲೈನ್ ತರಗತಿಗಳನ್ನು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.


ಮನೆಯಿಂದಲೇ ಕೆಲಸ, ಕಾರ್ ಪೂಲಿಂಗ್ ಹಾಗೂ ವರ್ಚುವಲ್ ಸಭೆಗಳನ್ನು ಅಳವಡಿಸಿಕೊಳುವಂತೆಯೂ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಸೋಮವಾರ ಗುಜರಾತ್‌ನ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಅಂತರರಾಷ್ಟ್ರೀಯ ಬಿಕ್ಕಟ್ಟಿನಿಂದಾಗಿ ದೇಶದ ಆರ್ಥಿಕತೆ ಹಾಗೂ ಇಂಧನ ಸಂಪನ್ಮೂಲಗಳ ಮೇಲಿನ ಪರಿಣಾಮವನ್ನು ಕಡಿಮೆ ಮಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ತಿಳಿಸಿದ್ದಾರೆ.

'ಶಾಲೆಗಳಲ್ಲಿ ಆನ್‌ಲೈನ್ ತರಗತಿಗಳನ್ನು ಸ್ವಲ್ಪ ಸಮಯದವರೆಗೆ ಪರಿಗಣಿಸಬೇಕು' ಎಂದು ಸಲಹೆ ನೀಡಿದ್ದಾರೆ.

'ಪೆಟ್ರೋಲ್-ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವಂತೆ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವಿನಂತಿ ಮಾಡುತ್ತೇನೆ. ಮೆಟ್ರೊ, ಎಲೆಕ್ಟ್ರಿಕ್ ಬಸ್ ಹಾಗೂ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸಿ. ಕಾರು ಪೂಲಿಂಗ್ ಉತ್ತೇಜಿಸಿ' ಎಂದು ಹೇಳಿದ್ದಾರೆ.

'ಡಿಜಿಟಲ್ ತಂತ್ರಜ್ಞಾನವು ಅನೇಕ ವಿಷಯಗಳನ್ನು ಸರಳೀಕರಣಗೊಳಿಸಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ವರ್ಚುವಲ್ ಸಭೆಗಳು, ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡುವುದು ಅಗತ್ಯ' ಎಂದು ಸಲಹೆ ನೀಡಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries