ಬಿಜೆಪಿ ನಾಲ್ಕು, ಕಾಂಗ್ರೆಸ್ ಎರಡರಲ್ಲಿ ಗೆಲುವು
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ನಾಗಾಲ್ಯಾಂಡ್, ತ್ರಿಪುರಾದಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ನಾಲ್ಕು, ಕಾಂಗ್ರೆಸ್ ಎರಡು, ಹಾಗೂ ಎನ್‌ಸಿಪಿ ಒಂದರಲ್ಲಿ ಗೆಲುವು ದಾಖಲಿಸಿವೆ.
ಕೇರಳದ ಮೂರು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ 'ಕಮಲ'
ಮತ ಎಣಿಕೆಯಲ್ಲೇ ಬಿಜೆಪಿಯಿಂದ ಯೋಜಿತ ಪಿತೂರಿ: ಮಮತಾ ಬ್ಯಾನರ್ಜಿ
West Bengal: ಮಮತಾ ಸರ್ಕಾರದ 20 ಸಚಿವರಿಗೆ ಹಿನ್ನಡೆ
ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಮುನ್ನಡೆ: ಮೋದಿ, ಶಾಗೆ ಎಚ್‌ಡಿಕೆ ಅಭಿನಂದನೆ
Kerala Results: ಸೋಲಿನ ಭೀತಿಯಿಂದ ಸಿಎಂ ಪಾರು, ನೆಲಕಚ್ಚಿದ ಸಚಿವರು
ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ಸಾಗುತ್ತಿದೆ. 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಯುಡಿಎಫ್ 104 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಆಡಳಿತರೂಢ ಎಲ್‌ಡಿಎಫ್ ಹೀನಾಯ ಸೋಲಿನತ್ತ ಮುಖ ಮಾಡಿದೆ. 34 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಗಳಿಸಿದೆ. ಅತ್ತ ಎನ್‌ಡಿಎ ಎರಡು ಸ್ಥಾನಗಳಲ್ಲಿ ಗೆಲುವಿನತ್ತ ಮುನ್ನಡೆದಿದೆ.
ಮೊದಲ ಐದು ಸುತ್ತಿನ ಮತ ಎಣಿಕೆ ವೇಳೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿನ್ನಡೆಯಲ್ಲಿದ್ದರು. ಆದರೆ 13ನೇ ಸುತ್ತಿನ ವೇಳೆಗೆ ತಮ್ಮ ನಿಕಟ ಸ್ಪರ್ಧಿ ವಿ.ಪಿ. ಅಬ್ದುಲ್ ರಶೀದ್ ಅವರಿಗಿಂತ 11 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
Puducherry Results: 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ
ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್‌ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಾಗಲಕೋಟೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಜಯಭೇರಿ ಬಾರಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ.
ದಾವಣಗೆರೆ: 21ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 4,873 ಮತಗಳ ಮುನ್ನಡೆ
* ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 68,619
* ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 63,746
* ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 18,485
* ಮೂರು ಮತಯಂತ್ರಗಳ ವಿ.ವಿ.ಪ್ಯಾಟ್ ಮತ ಎಣಿಕೆ ಮಾತ್ರ ಬಾಕಿ ಇದೆ
ಅಸ್ಸಾಂ, ಪುದುಚೆರಿ, ಕೇರಳ, ಬಂಗಾಳದ ಚಿತ್ರಣ ಬಹುತೇಕ ಸ್ಪಷ್ಟವಾಗಿದೆ. ತಮಿಳುನಾಡಿನಲ್ಲಿ ಟಿವಿಕೆ ಮತ್ತು ಡಿಎಂಕೆ ನಡುವೆ ಇನ್ನೂ ಪೈಪೋಟಿ ಇದೆ.
ದಾವಣಗೆರೆ: 20ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 4,967 ಮತಗಳ ಮುನ್ನಡೆ
* ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 67,576
* ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 62,609
* ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 18,471
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಮತ ಎಣಿಕೆಯಲ್ಲೇ ಬಿಜೆಪಿಯಿಂದ ಯೋಜಿತ ಪಿತೂರಿ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ನಡುವೆಯೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಬಿಜೆಪಿ ಯೋಜಿತ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
Kerala Results: ಕಾಸರಗೋಡು-ಮಂಜೇಶ್ವರದಲ್ಲಿ ಬಿಜೆಪಿಗೆ ಹಿನ್ನಡೆ, ಯುಡಿಎಫ್‌ಗೆ ಜಯ
ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್‌ಗೆ ಸೋಲು
ದಾವಣಗೆರೆ| ಮತಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ: ಮೂರು ಮತಯಂತ್ರಗಳ ವಿ.ವಿ.ಪ್ಯಾಟ್ ಎಣಿಕೆ
ಮೂರು ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿ.ವಿ.ಪ್ಯಾಟ್ ಎಣಿಕೆಗೆ ಚುನಾವಣಾಧಿಕಾರಿ ನಿರ್ಧರಿಸಿದ್ದಾರೆ. ದಕ್ಷಿಣ ವಿಧಾನಸಭಾ ಕ್ಷೇತ್ರದ 111, 121 ಹಾಗೂ 139ನೇ ಮತಗಟ್ಟೆಯ ಮತಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಮತಯಂತ್ರ ತೆರೆಯಲು ಸಾಧ್ಯವಾಗಿಲ್ಲ. ಅಂತಿಮವಾಗಿ ಈ ಮೂರು ಮತಯಂತ್ರಗಳ ವಿ.ವಿ. ಪ್ಯಾಟ್ ಎಣಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. 21ನೇ ಸುತ್ತಿನ ಮತ ಎಣಿಕೆ ಮುಗಿದ ಬಳಿಕ ವಿ.ವಿ.ಪ್ಯಾಟ್ ಎಣಿಕೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕೇರಳ ಚುನಾವಣೆ: ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿಗೆ ಗೆಲುವು
ಪುತ್ತುಪ್ಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮಗ ಚಾಂಡಿ ಉಮ್ಮನ್ ಅವರು 52,907 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಭಾರಿ ಅಂತರದ ಜಯ: ವಿಜಯೋತ್ಸವ ಇಲ್ಲ
ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನಿಧನದ ಬಳಿಕ ತೆರವಾದ ಬಾರಾಮತಿ ಕ್ಷೇತ್ರದ ಉಪಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಪತ್ನಿ, ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ವಿಜಯಶಾಲಿಯಾಗಿದ್ದಾರೆ. ಅವರು ಭರ್ಜರಿ 1.75 ಲಕ್ಷಕ್ಕೂ ಅಧಿಕ ಮತಗನ್ನು ಪಡೆದು ಗೆದ್ದಿದ್ದಾರೆ. ಸುನೇತ್ರಾ ಪವಾರ್ ಅವರು ವಿಜಯಶಾಲಿಯಾದರೂ ಕ್ಷೇತ್ರದಲ್ಲಿ ಯಾವುದೇ ಸಂಭ್ರಮಾಚರಣೆ ಇಲ್ಲ ಎಂದು ಪವಾರ್ ಕುಟುಂಬದವರು ಘೋಷಣೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್, ತಮಿಳುನಾಡಿನಲ್ಲಿ ಟಿವಿಕೆ ಪಕ್ಷಗಳು ಮುನ್ನಡೆ ಸಾಧಿಸಿವೆ.
ದಾವಣಗೆರೆ: 18ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 5,824 ಮತಗಳ ಮುನ್ನಡೆ
* ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 64,039
* ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 58,215
* ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 18,440
ದಾವಣಗೆರೆ: 18ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 5,657 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 59,992
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 54,335
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 18,023
ತಮಿಳುನಾಡು: ಸ್ಟಾಲಿನ್, ಉದಯನಿಧಿ ಸೇರಿ 15 ಸಚಿವರಿಗೆ ಹಿನ್ನಡೆ
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ 'ಟಿವಿಕೆ' ಕಮಾಲ್
234 ಕ್ಷೇತ್ರಗಳ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ವಿಜಯ್ ನೇತೃತ್ವದ 'ಟಿವಿಕೆ' ಪಕ್ಷ ಮುನ್ನಡೆ ಸಾಧಿಸಿದೆ.
ತಮಿಳುನಾಡು: ಟಿವಿಕೆ ಮುಖ್ಯಸ್ಥ ವಿಜಯ್ ನಿವಾಸಕ್ಕೆ ನಟಿ ತ್ರಿಶಾ ಆಗಮನ
ತಮಿಳುನಾಡು: ಟಿವಿಕೆ ಮುಖ್ಯಸ್ಥ ವಿಜಯ್ ನಿವಾಸದಲ್ಲಿ ಸಂಭ್ರಮಾಚರಣೆ
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಒಕ್ಕೂಟಕ್ಕೆ ಭಾರಿ ಮುನ್ನಡೆ
ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುನ್ನಡೆ
ದಾವಣಗೆರೆ: 15ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 6,023 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 49,237
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 43,214
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 15,859
ತಮಿಳುನಾಡಿನಲ್ಲಿ ವಿಜಯ್ ಗೆಲುವಿಗೆ ಕಾರಣವಾದ ಅಂಶಗಳು
* ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿ
* 18ರಿಂದ 39 ವರ್ಷದೊಳಗಿನ ಮತದಾರರೇ ಹೆಚ್ಚು
* ಶೇ 42ರಷ್ಟು ಯುವ ಮತದಾರರಿದ್ದು, ಐಟಿ ಉದ್ಯೋಗಿ-ವಿದ್ಯಾರ್ಥಿಗಳನ್ನು ಸೆಳೆಯುವಲ್ಲಿ ಯಶಸ್ವಿ
* ಮಹಿಳೆಯರಿಗೆ 'ಗ್ಯಾರಂಟಿ' ಯೋಜನೆಗಳ ಘೋಷಣೆ
* ಮಾಸಿಕ ₹2,500 ಹಣ, ಮದುವೆಗೆ 8 ಗ್ರಾಂ ಚಿನ್ನದ ಭರವಸೆ
* ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಾರ್ಷಿಕ ₹15,000
* ಸಣ್ಣ ರೈತರ ಕೃಷಿ ಸಾಲ ಮನ್ನಾ, ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ
* ಎಐ ಯುನಿವರ್ಸಿಟಿ, ಎಐ ಸಿಟಿ ನಿರ್ಮಾಣದ ಭರವಸೆ
ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ
ದಾವಣಗೆರೆ: 14ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 7,423 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 46,460
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ -39,037
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 15,303
2 ಕ್ಷೇತ್ರಗಳಲ್ಲೂ ವಿಜಯ್‌ಗೆ ಮುನ್ನಡೆ
ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರಗಳಲ್ಲಿ ಟಿವಿಕೆ ಅಭ್ಯರ್ಥಿ, ನಟ ವಿಜಯ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದಾವಣಗೆರೆ: 13ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 8,813 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 44,028
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ -35,215

