HEALTH TIPS

ಕಾಕ್ರೋಚ್ ಜನತಾ ಪಾರ್ಟಿಗೆ ಮಮತಾ ಬ್ಯಾನರ್ಜಿ, ಅಭಿಷೇಕ್ ಬೆಂಬಲ

 ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿಗೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಸೋಮವಾರ ತಿಳಿಸಿದ್ದಾರೆ.


ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ವಾರ ಪೂರ್ತಿ ಮಹತ್ವದ ಸಭೆಗಳು ನಡೆದಿವೆ. ಇಬ್ಬರೂ ಜನಪರ ಹೋರಾಟದ ಕಡೆಗೆ ಗಮನ ಹರಿಸಿದ್ದು, ಅಚಲ ಸಂಕಲ್ಪ ಹೊಂದಿದ್ದಾರೆ. ಇದರೊಂದಿಗೆ, ಅವರಿಬ್ಬರೂ ಕಾಕ್ರೋಚ್ ಚಳವಳಿಯ ಬಗ್ಗೆ ಒಲವು ಹಾಗೂ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ' ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಅನುಭವಿಸಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಸಿಜೆಪಿಗೆ ಬೆಂಬಲ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಏನಿದು ಕಾಕ್ರೋಚ್ ಜನತಾ ಪಾರ್ಟಿ..?

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ, 'ಕೆಲವು ಯುವಕರು ಜಿರಳೆಗಳ (ಕಾಕ್ರೋಚ್) ತರಹ ಇದ್ದಾರೆ. ಅವರಿಗೆ ಯಾವುದೇ ಉದ್ಯೋಗ ಸಿಗುವುದಿಲ್ಲ ಅಥವಾ ವೃತ್ತಿಪರ ಜಗತ್ತಿನಲ್ಲಿ ಸ್ಥಾನ ಸಿಗುವುದಿಲ್ಲ. ಅಂತಹವರು ಮಾಧ್ಯಮ, ಸಾಮಾಜಿಕ ಜಾಲತಾಣಗಳು ಹಾಗೂ ಆರ್‌ಟಿಐ ಕಾರ್ಯಕರ್ತರಾಗಿ ಎಲ್ಲರ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ' ಎಂದು ಹೇಳಿದ್ದರು.

ಇದರ ಬೆನ್ನಲ್ಲೇ, ಅಮೆರಿಕದ ಬೋಸ್ಟನ್‌ನಲ್ಲಿರುವ ಭಾರತೀಯ ಮೂಲದ ಯುವಕ ಅಭಿಜೀತ್ ದಿಪ್ಕೆ ಮೇ 16ರಂದು ಕಾಕ್ರೋಚ್ ಜನತಾ ಪಾರ್ಟಿಯನ್ನು ಆರಂಭಿಸಿದ್ದರು. 30 ವರ್ಷದ ಅಭಿಜೀತ್ ದಿಪ್ಕೆ ಅವರು 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಿಸಿ, ದೇಶದ ನಿರುದ್ಯೋಗ, ನೀಟ್ ಪೇಪರ್ ಲೀಕ್ ಹಗರಣ ಹಾಗೂ ಶಿಕ್ಷಣ ವ್ಯವಸ್ಥೆಯ ಲೋಪದೋಷಗಳ ವಿರುದ್ಧ ಮೀಮ್ಸ್‌ಗಳನ್ನು ಪೋಸ್ಟ್‌ ಮಾಡುವ ಮೂಲಕ ಕಾಕ್ರೋಚ್ ಚಳವಳಿ ಆರಂಭಿಸಿದರು.

ಖಾತೆಗಳ ಬ್ಲಾಕ್ ಆರೋಪ:

ಸಿಜೆಪಿಯ ಜನಪ್ರಿಯತೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಡಿಜಿಟಲ್ ವೇದಿಕೆಗಳಲ್ಲಿ ತಮ್ಮ ಪಕ್ಷದ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಸಂಸ್ಥಾಪಕ ದಿಪ್ಕೆ ಶನಿವಾರ ಆರೋಪಿಸಿದ್ದರು. ಅವರ ಅಧಿಕೃತ ಎಕ್ಸ್‌ ಖಾತೆಯನ್ನು ಮೇ 21ರಂದು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಆದಾಗ್ಯೂ, ಸದ್ಯ ಕಾಕ್ರೋಚ್ ಜನತಾ ಪಾರ್ಟಿ ಇನ್‌ಸ್ಟಾಗ್ರಾಮ್‌ನಲ್ಲಿ 2.29 ಕೋಟಿಗೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries