HEALTH TIPS

ತೈಲ ಬಿಕ್ಕಟ್ಟು| ಆನ್‌ಲೈನ್ ವಿಚಾರಣೆ ನಡೆಸಲು ಹೈಕೋರ್ಟ್‌ಗಳಿಗೆ ಸಿಜೆಐ ಸೂರ್ಯ ಕಾಂತ್ ಸೂಚನೆ

ನವದೆಹಲಿ: ದೇಶದಾದ್ಯಂತದ ಎಲ್ಲಾ ಹೈಕೋರ್ಟ್‌ಗಳಿಗೆ ಆನ್‌ಲೈನ್ ಮೂಲಕ ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಮತ್ತು ಅವುಗಳಲ್ಲಿ ಹೆಚ್ಚಿನ ಹೈಕೋರ್ಟ್‌ಗಳು ಈಗಾಗಲೇ ಇದನ್ನು ಜಾರಿಗೆ ತಂದಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಗುರುವಾರ ತಿಳಿಸಿದ್ದಾರೆ.

ಪಶ್ಚಿಮ ಏಶ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ, ದಿಲ್ಲಿಯ ಎಲ್ಲಾ ನ್ಯಾಯಾಲಯಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕೋರಿ ವಕೀಲೆಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತನ್ನ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠವು ಈ ಮಾಹಿತಿಯನ್ನು ನೀಡಿತು.

''ನಾನು ಈಗಾಗಲೇ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದೇನೆ. ಹೆಚ್ಚಿನವರು ಇದನ್ನು ಈಗಾಗಲೇ ಜಾರಿಗೆ ತಂದಿದ್ದಾರೆ. ಇದನ್ನು ವಕೀಲರು ಮತ್ತು ನ್ಯಾಯಾಧೀಶರು ಇಬ್ಬರೂ ಸ್ವಯಂಪ್ರೇರಣೆಯಿಂದ ಅನುಸರಿಸಬೇಕಾಗುತ್ತದೆ'' ಎಂದು ಸೂರ್ಯ ಕಾಂತ್ ಹೇಳಿದರು.

ದೇಶದ ಹಿತದೃಷ್ಟಿಯಿಂದ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಆನ್‌ಲೈನ್‌ನಲ್ಲಿ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಬೇಕೆಂದು ತನ್ನ ಅರ್ಜಿಯಲ್ಲಿ ಕೋರಲಾಗಿದೆ ಎಂದು ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ''ಜಿಲ್ಲಾ ನ್ಯಾಯಾಲಯಗಳು ಹೈಕೋರ್ಟ್‌ಗಳ ವ್ಯಾಪ್ತಿಗೆ ಬರುತ್ತವೆ. ಜಿಲ್ಲಾ ನ್ಯಾಯಾಲಯಗಳು ಹೈಕೋರ್ಟ್‌ಗಳ ಆಡಳಿತಾತ್ಮಕ ನಿಯಂತ್ರಣದಲ್ಲಿವೆ. ಹಾಗಾಗಿ ಈ ವಿಷಯದಲ್ಲಿ ಹೈಕೋರ್ಟ್‌ಗಳೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ. ಜಿಲ್ಲಾ ನ್ಯಾಯಾಲಯಗಳಲ್ಲೂ ಆನ್‌ಲೈನ್ ವಿಚಾರಣೆಗೆ ಕ್ರಮ ತೆಗೆದುಕೊಳ್ಳುವಂತೆಯೂ ನಾನು ಹೈಕೋರ್ಟ್‌ಗಳಿಗೆ ಮನವಿ ಮಾಡಿದ್ದೇನೆ'' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries