ಮಂಗಳೂರು: ಕಾಸರಗೋಡು ಜಿಲ್ಲೆಯ ಪೈವಳಿಕೆ ಪಂಚಾಯಿತಿ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಮೇ 16ರಂದು ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸಕ್ರ್ಯೂಟ್ ಹೌಸ್ ನಲ್ಲಿ ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು.
ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು - ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಎ ಆರ್ ಸುಬ್ಬಯಕಟ್ಟೆ ಸಚಿವರಿಗೆ ಆಹ್ವಾನಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ದ. ಕ ಜಿಲ್ಲಾ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೆಸ್ಕಾಮ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕನ್ನಡ ಸಂಸ್ಕೃತಿ ಉತ್ಸವ ಸಮಿತಿ ಪ್ರಧಾನ ಸಂಚಾಲಕ ಅಶೋಕ್ ಭಂಡಾರಿ ಕುಡಾಲು, ಸಂಚಾಲಕ ರಾಘವ ಚೇರಾಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ ಉಳಿಯತ್ತಡ್ಕ ಉಪಸ್ಥಿತರಿದ್ದರು.



