HEALTH TIPS

ಪ.ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಸೋಭಾಂದೇಬ್ ಚಟ್ಟೋಪಾಧ್ಯಾಯ ನೇಮಕ

 ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಲ್ಲಿಗಂಗೆ ಶಾಸಕ ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇಮಿಸಿದೆ. 


ಧನೇಖಾಲಿ ಶಾಸಕಿ ಅಸಿಮಾ ಪಾತ್ರ ಮತ್ತು ಚೌರಂಗಿ ಶಾಸಕಿ ನಯನಾ ಬಂಡೋಪಾಧ್ಯಾಯ ಅವರು ವಿರೋಧ ಪಕ್ಷದ ಉಪ ನಾಯಕಿಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪಕ್ಷವು ಶನಿವಾರ ಸಂಜೆ ಘೋಷಿಸಿತ್ತು.

‌ಕೋಲ್ಕತ್ತ ಬಂದರು ಶಾಸಕ ಫಿರ್ಹಾದ್ ಹಕೀಮ್ ಅವರನ್ನು ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಹಕೀಮ್ ಕೋಲ್ಕತ್ತ ಮಹಾನಗರ ಪಾಲಿಕೆಯ ಮೇಯರ್ ಕೂಡ ಆಗಿದ್ದಾರೆ.

ಹೊಸದಾಗಿ ನೇಮಕಗೊಂಡ ನಾಯಕರು ಬಂಗಾಳದ ಜನರ ಹಿತಾಸಕ್ತಿಗಾಗಿ ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಟಿಎಂಸಿ ಹೇಳಿದೆ.

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ‌ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 294 ಸದಸ್ಯ ಬಲದ ಸದನದಲ್ಲಿ 207 ಸ್ಥಾನಗಳನ್ನು ಗೆದ್ದು ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಶನಿವಾರ ಬೆಳಿಗ್ಗೆ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

2021ರ ಮೇ ತಿಂಗಳಲ್ಲಿ ಮಮತಾ ಬ್ಯಾನರ್ಜಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರ ನೇತೃತ್ವದ ಟಿಎಂಸಿ ಪಕ್ಷ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಚುನಾವಣಾ ಸೋಲಿನ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ನಿರಾಕರಿಸಿದ್ದರು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries