HEALTH TIPS

ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮನೆಗೆ ಪೊಲೀಸ್ ಕಾವಲು: ಕಾರಣವೇನು?

 ಛತ್ರಪತಿ ಸಂಭಾಜಿನಗರ: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ 'ಕಾಕ್ರೋಚ್ ಜನತಾ ಪಾರ್ಟಿ' ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮಹಾರಾಷ್ಟ್ರದ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇತ್ತೀಚೆಗೆ ಸಿಜೆಪಿ ಸಂಸ್ಥಾಪಕರಿಗೆ ಹಾಗೂ ಅವರ ಪೋಷಕರಿಗೆ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 


30 ವರ್ಷದ ಅಭಿಜೀತ್ ದಿಪ್ಕೆ ಸದ್ಯ ಅಮೆರಿಕದ ಪ್ರತಿಷ್ಠಿತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ಛತ್ರಪತಿ ಸಂಭಾಜಿನಗರದ ಎಂಐಡಿಸಿ ವಾಲುಜ್ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಪೋಷಕರು ವಾಸಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇವರ ಮನೆಗೆ ದಿನದ 24 ಗಂಟೆಯವರೆಗೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ ಎಂದು ಉಪ ಪೊಲೀಸ್ ಕಮಿಷನರ್ (ಡಿಸಿಪಿ) ಪಂಕಜ್ ಅತುಲ್ಕರ್ ಖಚಿತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಟ್ರೆಂಡ್ ಆಗುತ್ತಿರುವುದರಿಂದ ಸಾರ್ವಜನಿಕರು ಗುಂಪುಗೂಡುವುದನ್ನು ತಡೆಯಲು ಭದ್ರತೆ ನೀಡಲಾಗಿದೆ. ಆದರೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆದರಿಕೆ ಆರೋಪದ ಬೆನ್ನಲ್ಲೇ ಪೊಲೀಸ್‌ರಿಂದ ಭದ್ರತೆ

ಕಳೆದ ವಾರವಷ್ಟೇ ಆನ್‌ಲೈನ್‌ನಲ್ಲಿ ರಾಜಕೀಯ ವ್ಯಂಗ್ಯಚಿತ್ರ ಮತ್ತು ಮೀಮ್ಸ್‌ಗಳಿಗಾಗಿ ಆರಂಭವಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ' ಖಾತೆ ಯುವಜನರ ಬೆಂಬಲದೊಂದಿಗೆ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಸರ್ಕಾರದ ಕಡೆಯಿಂದ ಸಿಜೆಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಅಭಿಜೀತ್ ಆರೋಪಿಸಿದ್ದಾರೆ. ಅಲ್ಲದೇ ನನಗೆ ಮತ್ತು ಪೋಷಕರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ ಎಂದೂ ಅವರು ಹೇಳಿದ್ದಾರೆ.

ಏನಿದು ಕಾಕ್ರೋಚ್ ಜನತಾ ಪಾರ್ಟಿ ವಿವಾದ?

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ, 'ಕೆಲವು ಯುವಕರು ಜಿರಳೆಗಳ (ಕಾಕ್ರೋಚ್) ತರಹ ಇದ್ದಾರೆ. ಅವರಿಗೆ ಯಾವುದೇ ಉದ್ಯೋಗ ಸಿಗುವುದಿಲ್ಲ ಅಥವಾ ವೃತ್ತಿಪರ ಜಗತ್ತಿನಲ್ಲಿ ಸ್ಥಾನ ಸಿಗುವುದಿಲ್ಲ. ಅಂತಹವರು ಮಾಧ್ಯಮ, ಸಾಮಾಜಿಕ ಜಾಲತಾಣಗಳು ಹಾಗೂ ಆರ್‌ಟಿಐ ಕಾರ್ಯಕರ್ತರಾಗಿ ಎಲ್ಲರ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ' ಎಂದು ಹೇಳಿದ್ದರು.

ಇದರ ಬೆನ್ನಲ್ಲೇ, ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಗಿ 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಿಸಿ, ದೇಶದ ನಿರುದ್ಯೋಗ, ಪೇಪರ್ ಲೀಕ್ ಹಗರಣ ಹಾಗೂ ಶಿಕ್ಷಣ ವ್ಯವಸ್ಥೆಯ ಲೋಪದೋಷಗಳ ವಿರುದ್ಧ ಮೀಮ್ಸ್‌ಗಳನ್ನು ಪೋಸ್ಟ್‌ ಮಾಡುವ ಮೂಲಕ ಕಾಕ್ರೋಚ್ ಚಳವಳಿ ಆರಂಭಿಸಿದರು.

ಆದರೆ ಆ ಬಳಿಕ 'ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಕಲಿ ಪದವಿ ಪಡೆದು ವಕೀಲ ವೃತ್ತಿಗೆ ಬರುವವರನ್ನು ಉಲ್ಲೇಖಿಸಿ ಮಾತ್ರ ನಾನು ಆ ಮಾತು ಹೇಳಿದ್ದಾಗಿ ಸಿಜೆಐ ಸೂರ್ಯಕಾಂತ್ ನಂತರ ಸ್ಪಷ್ಟನೆ ನೀಡಿದ್ದಾರೆ.

ಸದ್ಯ ಕಾಕ್ರೋಚ್ ಜನತಾ ಪಾರ್ಟಿ ಇನ್‌ಸ್ಟಾಗ್ರಾಮ್‌ನಲ್ಲಿ 2.29 ಕೋಟಿಗೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries