"ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅಕ್ರಮಗಳು ಕಂಡು ಬಂದರೆ, ಯಾರನ್ನೂ ಬಿಡುವುದಿಲ್ಲ" ಎಂದು ಅವರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆಯನ್ನು ನೀಡಿದ್ದಾರೆ.
ದಿಲ್ಲಿಯಲ್ಲಿ ಆಯೋಜನೆಗೊಂಡಿದ್ದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ನೂತನ ಡಿಜಿಟಲ್ ಮೌಲ್ಯಮಾಪನ ಮಾದರಿಯನ್ನು ಸಮರ್ಥಿಸಿಕೊಂಡರು. ಇದೇ ವೇಳೆ ಈ ಪದ್ಧತಿಯಿಂದ ವಿದ್ಯಾರ್ಥಿಗಳ ಮೇಲೆ ಉಂಟಾಗಿರುವ ಒತ್ತಡವನ್ನೂ ಅವರು ಒಪ್ಪಿಕೊಂಡರು.
"ನಾನು ಇದರ ಹೊಣೆಯನ್ನು ಹೊರುತ್ತೇನೆ. ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು. ನಾವೆಲ್ಲ ಈ ಸವಾಲಿನ ಗುರಿಯತ್ತ ಕೆಲಸ ಮಾಡುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.
ಪೋರ್ಟಲ್ ನ ತಾಂತ್ರಿಕ ಸಮಸ್ಯೆ, ಪಾವತಿ ಸಮಸ್ಯೆ ಮತ್ತು ಮರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಗೊಂದಲಗಳ ಕುರಿತು ವಿದ್ಯಾರ್ಥಿಗಳಿಂದ ದೂರುಗಳು ಹರಿದು ಬಂದ ಹಿನ್ನೆಲೆ ಸಚಿವ ಧರ್ಮೇಂದ್ರ ಪ್ರಧಾನ್ ಈ ಹೇಳಿಕೆ ನೀಡಿದ್ದಾರೆ.

