ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಮೊದಲ ಬಾರಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪಕ್ಷದ ಕೇಂದ್ರ ವೀಕ್ಷಕರನ್ನಾಗಿ ಮಂಗಳವಾರ ನೇಮಿಸಲಾಗಿದೆ.
ಅಸ್ಸಾಂನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದ್ದು, ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಅವರನ್ನು ಕಳುಹಿಸುತ್ತಿದೆ.
ಕೇಸರಿ ಪಕ್ಷ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅಸ್ಸಾಂನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಸಹ-ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಅವರನ್ನು ಸಹ-ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಯಾರಾಗ್ತಾರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ.

