HEALTH TIPS

KERALA ಭಾರಿ ಮಳೆ: ಎರಡು ಜಿಲ್ಲೆಗಳಲ್ಲಿ'ಆರೆಂಜ್‌ ಅಲರ್ಟ್‌' ಘೋಷಣೆ

 ತಿರುವನಂತಪುರ : ಕೇರಳಂನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ರಾಜ್ಯದ ಎರಡು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ 'ಆರೆಂಜ್‌ ಅಲರ್ಟ್‌' ಘೋಷಿಸಿದೆ.


ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಿಗೆ 'ಆರೆಂಜ್‌ ಅಲರ್ಟ್‌' ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ 115.6 ಮಿ.ಮೀ.ಯಿಂದ 204.4 ಮಿ.ಮೀವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ.

ತಿರುವನಂತಪುರ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಕೋಯಿಕ್ಕೋಡ್‌, ವಯನಾಡ್‌, ಕಣ್ಣೂರು ಮತ್ತು ಕಾಸರಗೋಡಿನಲ್ಲಿ 'ಯೆಲ್ಲೋ ಅಲರ್ಟ್‌' ಘೋಷಿಸಲಾಗಿದ್ದು, 64.5 ಮಿ.ಮೀನಿಂದ 115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

'ಭಾರಿ ಮಳೆಯಾಗುತ್ತಿರುವ ಕಾರಣ ಪ್ರವಾಹ ಪೀಡಿತ ಮತ್ತು ಭೂಕುಸಿತದ ಸಾಧ್ಯತೆಗಳಿರುವ ಪ್ರದೇಶದಲ್ಲಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಿ' ಎಂದು ಸಾರ್ವಜನಿಕರಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಭಾರಿ ಮಳೆಯ ಸಂದರ್ಭದಲ್ಲಿ, ನದಿ ದಾಟುವುದು, ಸ್ನಾನ ಮತ್ತು ಮೀನುಗಾರಿಕೆಗೆ ಮಾಡುವುದು, ತುಂಬಿರುವ ನದಿಗಳ ಸೇತುವೆ ಮೇಲೆ ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಗುಡ್ಡಗಾಡು ಪ್ರದೇಶ, ಜಲಪಾತ ಮತ್ತು ನೀರಿನ ಮೂಲಗಳಿಗೆ ಅನಗತ್ಯ ಪ್ರವಾಸ ಕೈಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries