HEALTH TIPS

NEET ಪ್ರಶ್ನೆ ಪತ್ರಿಕೆ ಸೋರಿಕೆ; ಪ್ರಮುಖ ಸೂತ್ರಧಾರಿ ಕುಲಕರ್ಣಿಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಸೂತ್ರಧಾರಿ ಎನ್ನಲಾದ ಪ್ರಹ್ಲಾದ್ ವಿಠಲರಾವ್ ಕುಲಕರ್ಣಿ ಮತ್ತು ಆರೋಪಿ ಶಿವರಾಜ್ ರಘುನಾಥ್ ಅವರನ್ನು ದಿಲ್ಲಿ ನ್ಯಾಯಾಲಯ ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಉಸ್ತುವಾರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ನ್ಯಾಯಾಧೀಶ ವಿದ್ಯಾ ಪ್ರಕಾಶ್ ಅವರು ಇಬ್ಬರನ್ನೂ ಜೂನ್ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೆ 13 ಮಂದಿಯನ್ನು ಬಂಧಿಸಿದೆ.

ಸಿಬಿಐ ಪ್ರಕಾರ, ಪುಣೆಯ ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದ ಕುಲಕರ್ಣಿ ಅವರು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ) ಪರವಾಗಿ ನೀಟ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು ಮತ್ತು ಪ್ರಶ್ನೆ ಪತ್ರಿಕೆಗಳನ್ನು ನೋಡಬಹುದಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries