ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದು, ಮೋದಿಯವರಿಗೆ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ.
ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜಾರ್ಜಿಯಾ ಮೆಲೋನಿ ಅವರು, “Weಟಛಿome ಣo ಖome, ಒಥಿ ಈಡಿieಟಿಜ” ಎಂದು ಹೇಳಿದ್ದು, ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ನಡುವೆ ಪ್ರಧಾನಿ ಮೋದಿಯವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ರೋಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೆಲೋನಿ ಜೊತೆ ಭೋಜನ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆಯಿತು. ಬಳಿಕ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿದೆವು. ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಇಂದು ನಡೆಯಲಿರುವ ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ. ಭಾರತ–ಇಟಲಿ ಸ್ನೇಹವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಚರ್ಚೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ರೋಮ್‌ಗೆ ತಲುಪುತ್ತಿದ್ದಂತೆಯೇ ಅನಿವಾಸಿ ಭಾರತೀಯರು ಭರ್ಜರಿ ಸ್ವಾಗತ ಕೋರಿದ್ದಾರೆ. ಭಾರತೀಯ ಧ್ವಜಗಳನ್ನು ಹಿಡಿದು “ಮೋದಿ ಮೋದಿ” ಘೋಷಣೆ ಕೂಗಿದ ಅನಿವಾಸಿ ಭಾರತೀಯರು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

