ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟು ದೀರ್ಘಕಾಲದವರೆಗೆ ಮುಂದುವರಿದರೆ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಬೇಕಾಗಬಹುದು ಎಂದು ಖಃI ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಸರಕಾರ ಹಣಕಾಸು ಶಿಸ್ತು ಪಾಲಿಸಿಕೊಂಡು, ಆರ್ಥಿಕ ಬಲವರ್ಧನೆಯ ದಾರಿಯಲ್ಲಿ ಸಾಗುತ್ತಿದೆ ಎಂದು ಹೇಳಿದ ಸಂಜಯ್ ಮಲ್ಹೋತ್ರಾ, ಭಾರತ ಇಂಧನ ಮತ್ತು ರಸಗೊಬ್ಬರಗಳ ಆಮದುಗಳ ಮೇಲೆ ಬಹಳ ಮಟ್ಟಿಗೆ ಅವಲಂಬಿತವಾಗಿದೆ ಎಂದು ಹೇಳಿದರು.
ಪ್ರಸ್ತುತ ಉಂಟಾಗುತ್ತಿರುವ ಜಾಗತಿಕ ಅಡಚಣೆಗಳು ಈಗ ಭಾರತಕ್ಕೂ ಪರಿಣಾಮ ಬೀರಲು ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ.
ಸ್ವಿಟ್ಝರ್ ಲ್ಯಾಂಡ್ ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಹಾರ್ಮುಝ್ ಜಲಸಂಧಿಯ ದಿಗ್ಬಂಧನವು ತೈಲ ಮತ್ತು ಅನಿಲ ಪೂರೈಕೆಯನ್ನು ಅಡ್ಡಿಪಡಿಸಿದೆ. ಇದರಿಂದಾಗಿ ಇಂಧನ ಬೆಲೆಗಳು ಹೆಚ್ಚಿವೆ. ಈ ಪರಿಸ್ಥಿತಿ ಇನ್ನೂ ದೀರ್ಘಕಾಲ ಮುಂದುವರಿದರೆ, ಸರಕಾರ ಕೆಲವೊಂದು ಬೆಲೆಯೇರಿಕೆಯನ್ನು ಮಾಡಬಹುದು ಎಂದು ಹೇಳಿದ್ದಾರೆ.

