HEALTH TIPS

ಪಶ್ಚಿಮ ಬಂಗಾಳದ ಸಿಎಂ ಸಲಹೆಗಾರನಾಗಿ SIR ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ನೇಮಕ

ಕೋಲ್ಕತ್ತ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಲಹೆಗಾರರಾಗಿ, ಮಾಜಿ ಐಎಎಸ್‌ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಶನಿವಾರ(ಮೇ 9) ನೇಮಕ ಮಾಡಲಾಗಿದೆ. 

1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಬ್ರತಾ ಗುಪ್ತಾ ಅವರನ್ನು, ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಎಸ್‌ಐಆರ್‌ ವಿಶೇಷ ವೀಕ್ಷಕರನ್ನಾಗಿ ನೇಮಕ ಮಾಡಿತ್ತು.

ಸುಬ್ರತಾ ಗುಪ್ತಾ ಅವರ ಅಪಾರ ಅನುಭವವು ಹೊಸ ಸರ್ಕಾರದಲ್ಲಿನ ಆಡಳಿತದ ನೀತಿ, ನಿಯಮಗಳು ಮತ್ತು ಆಡಳಿತ ಸಂಬಂಧಿತ ವಿಷಯಗಳಲ್ಲಿ ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಎಎಸ್ ಅಧಿಕಾರಿ ಶಂತನು ಬಾಲ ಅವರನ್ನು ಮುಖ್ಯಮಂತ್ರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶಂತನು ಬಾಲ ಅವರು 2017ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ, ಸಿಎಂ ಕಚೇರಿಯ ಪುನರ್‌ರಚನೆ ಮಾಡುವ ಉದ್ದೇಶದಿಂದ ಶಂತನು ಬಾಲ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ಬರನ್ನೂ ನೇಮಕ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries