ನವದೆಹಲಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ, 'ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ' ಎಂಬ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಹೇಳಿಕೆಯನ್ನು ಆಯೋಗವು ಪುನರುಚ್ಛರಿಸಿದೆ.
ಇದೇ ವರ್ಷ ರಾಷ್ಟ್ರೀಯ ಮತದಾರರ ದಿನದಂದು ಮಾತನಾಡಿದ್ದ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗವು ಹಿಂದೆಯೂ ಮತದಾರರ ಪರವಾಗಿ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ' ಎಂದು ಹೇಳಿದ್ದರು.
ಎಸ್‌ಐಆರ್ ನಡೆನವದೆಹಲಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ, 'ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ' ಎಂಬ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಹೇಳಿಕೆಯನ್ನು ಆಯೋಗವು ಪುನರುಚ್ಛರಿಸಿದೆ.
ಇದೇ ವರ್ಷ ರಾಷ್ಟ್ರೀಯ ಮತದಾರರ ದಿನದಂದು ಮಾತನಾಡಿದ್ದ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗವು ಹಿಂದೆಯೂ ಮತದಾರರ ಪರವಾಗಿ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ' ಎಂದು ಹೇಳಿದ್ದರು.
ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಅಷ್ಟೇ ಅಲ್ಲದೆ, ಈ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಸಾಂವಿಧಾನಿಕ ಆದೇಶಕ್ಕೆ ಜೀವ ತುಂಬುತ್ತದೆ ಎಂದು ನ್ಯಾಯಾಲಯ ಹೇಳಿದೆ.
'ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಕೇವಲ ಮತದಾನದ ತಾಂತ್ರಿಕ ಪ್ರಕ್ರಿಯೆಯನ್ನು ಮಾತ್ರ ಅವಲಂಬಿಸಿರುವುದಿಲ್ಲ, ಬದಲಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆಯ ತಳಹದಿಯಾಗಿರುವ ಮತದಾರರ ಪಟ್ಟಿಯ ಸಮಗ್ರತೆ, ನಿಖರತೆ ಮತ್ತು ಪವಿತ್ರತೆಯನ್ನು ಅಷ್ಟೇ ಪ್ರಮಾಣದಲ್ಲಿ ಅವಲಂಬಿಸಿರುತ್ತವೆ ಎಂದು ಅಭಿಪ್ರಾಯಪಟ್ಟಿದೆ.
ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಹಲವು ವಿರೋಧ ಪಕ್ಷಗಳು ಎಸ್‌ಐಆರ್ ಪ್ರಕ್ರಿಯೆಯ ಕುರಿತು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದವು.ಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಅಷ್ಟೇ ಅಲ್ಲದೆ, ಈ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಸಾಂವಿಧಾನಿಕ ಆದೇಶಕ್ಕೆ ಜೀವ ತುಂಬುತ್ತದೆ ಎಂದು ನ್ಯಾಯಾಲಯ ಹೇಳಿದೆ.
'ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಕೇವಲ ಮತದಾನದ ತಾಂತ್ರಿಕ ಪ್ರಕ್ರಿಯೆಯನ್ನು ಮಾತ್ರ ಅವಲಂಬಿಸಿರುವುದಿಲ್ಲ, ಬದಲಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆಯ ತಳಹದಿಯಾಗಿರುವ ಮತದಾರರ ಪಟ್ಟಿಯ ಸಮಗ್ರತೆ, ನಿಖರತೆ ಮತ್ತು ಪವಿತ್ರತೆಯನ್ನು ಅಷ್ಟೇ ಪ್ರಮಾಣದಲ್ಲಿ ಅವಲಂಬಿಸಿರುತ್ತವೆ ಎಂದು ಅಭಿಪ್ರಾಯಪಟ್ಟಿದೆ.
ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಹಲವು ವಿರೋಧ ಪಕ್ಷಗಳು ಎಸ್‌ಐಆರ್ ಪ್ರಕ್ರಿಯೆಯ ಕುರಿತು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದವು.