HEALTH TIPS

SIR ಮೇಲ್ಮನವಿ ನ್ಯಾಯಮಂಡಳಿಗೆ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ರಾಜೀನಾಮೆ

 ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಕೈಗೊಳ್ಳಲಾದ ವಿಶೇಷ ತೀವ್ರ ಪರಿಷ್ಕರಣೆ (SIಖ) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಮೇಲ್ಮನವಿಗಳನ್ನು ವಿಚಾರಣೆ ನಡೆಸುತ್ತಿದ್ದ SIಖ ಮೇಲ್ಮನವಿ ನ್ಯಾಯಮಂಡಳಿಗೆ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ರಾಜೀನಾಮೆ ನೀಡಿದ್ದಾರೆ. 


ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಭಾರತದ ಚುನಾವಣಾ ಆಯೋಗವು ನೇಮಕ ಮಾಡಿದ್ದ 19 ಮೇಲ್ಮನವಿ ನ್ಯಾಯಮಂಡಳಿ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಶಿವಜ್ಞಾನಂ ಕೂಡ ಒಬ್ಬರಾಗಿದ್ದರು. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವರು ಹುದ್ದೆ ತ್ಯಜಿಸಿರುವುದಾಗಿ ವರದಿಗಳು ತಿಳಿಸಿವೆ.

ವಿಧಾನಸಭಾ ಚುನಾವಣೆಗೆ ಮುನ್ನ ನಡೆದ SIಖ ಪ್ರಕ್ರಿಯೆಯಲ್ಲಿ 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು. ಇದರಲ್ಲಿ ಸುಮಾರು 27 ಲಕ್ಷ ಮಂದಿ ತಮ್ಮ ಹೆಸರು ಕೈಬಿಡುವಿಕೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು. ಇದರಲ್ಲಿ ಸುಮಾರು 27 ಲಕ್ಷ ಮಂದಿ ತಮ್ಮ ಹೆಸರು ಕೈಬಿಡುವಿಕೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಸಲ್ಲಿಸಿದವರಲ್ಲಿ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಸಾಹಿದುಲ್ಲಾ ಮುನ್ಷಿ ಮತ್ತು ಅವರ ಕುಟುಂಬದ ಸದಸ್ಯರೂ ಸೇರಿದ್ದರು. ಹಲವು ದಶಕಗಳಿಂದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರೂ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅವರ ಮತ್ತು ಕುಟುಂಬದ ಸದಸ್ಯರ ಹೆಸರುಗಳು ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಮುನ್ಷಿ, ಅವರ ಪತ್ನಿ ಹಾಗೂ ಕುಟುಂಬದ ಇತರ ಸದಸ್ಯರ ಹೆಸರುಗಳನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಯಿತು.

ಆದರೆ, 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ವೇಳೆಗೆ ಮೇಲ್ಮನವಿ ಸಲ್ಲಿಸಿದ್ದ ಲಕ್ಷಾಂತರ ಮತದಾರರಲ್ಲಿ ಕೇವಲ 136 ಮಂದಿಯ ಹೆಸರುಗಳನ್ನು ಮಾತ್ರ ಅಂತಿಮವಾಗಿ ಮತದಾರರ ಪಟ್ಟಿಗೆ ಮರುಸೇರಿಸಲಾಗಿತ್ತು. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries