ಚೆನ್ನೈ: ಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಉದಯನಿಧಿ ಸ್ಟಾಲಿನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಇದರೊಂದಿಗೆ ಅವರು ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
17ನೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹಾಗೂ ಉದಯನಿಧಿ ಸ್ಟಾಲಿನ್ ನಡುವಿನ ರಾಜಕೀಯ ಮುಖಾಮುಖಿಗೆ ವೇದಿಕೆ ಸಿದ್ಧವಾಗಿದ್ದು, ಇಬ್ಬರೂ ಚಲನಚಿತ್ರ ಕ್ಷೇತ್ರದ ಹಿನ್ನೆಲೆಯಿಂದ ಬಂದಿರುವುದು ವಿಶೇಷವಾಗಿದೆ.
ಪಕ್ಷದ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಮೇ 7ರಂದು ನಡೆದ ಡಿಎಂಕೆ ಶಾಸಕರ ಸಭೆಯಲ್ಲಿ ಉದಯನಿಧಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಹಿರಿಯ ನಾಯಕ ಕೆ.ಎನ್. ನೆಹರು ಅವರನ್ನು ಶಾಸಕಾಂಗ ಪಕ್ಷದ ಉಪನಾಯಕರನ್ನಾಗಿ ಹಾಗೂ ಮಾಜಿ ಸಚಿವ ಇ.ವಿ. ವೇಲು ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ (ವಿಪ್) ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

