HEALTH TIPS

ನಾಸಿಕ್ TCS ಪ್ರಕರಣ: ನಿದಾ ಖಾನ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ನಾಸಿಕ್: ಟಿಸಿಎಸ್‌ ನ ನಾಸಿಕ್ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಿದಾ ಖಾನ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಇಲ್ಲಿನ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕೆ.ಜಿ. ಜೋಶಿ ಅವರು ಶನಿವಾರ ಆದೇಶ ನೀಡಿ, ನಿದಾ ಖಾನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಬಂಧನದಿಂದ ಯಾವುದೇ ರಕ್ಷಣೆಯನ್ನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಎಪ್ರಿಲ್ 27ರಂದು ನಡೆದ ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (SIT) ಹಾಗೂ ಆರೋಪಿಯ ಪರ ವಕೀಲರ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿದೆ.

ಪ್ರಕರಣದಲ್ಲಿ ಹಲವಾರು ಆರೋಪಿಗಳು ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸಿರುವುದಾಗಿ ಆರೋಪಿಸಲಾಗಿದೆ. ದಿಯೋಲಾಲಿ ಮತ್ತು ಮುಂಬೈ ನಾಕಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಲವು ಎಫ್‌ಐಆರ್‌ ಗಳಲ್ಲಿ ಆಪರೇಷನ್ಸ್ ಮ್ಯಾನೇಜರ್ ಸೇರಿ ಒಟ್ಟು 8 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ನಿದಾ ಖಾನ್ ಪರ ವಕೀಲರಾದ ರಾಹುಲ್ ಕಾಸ್ಲಿವಾಲ್ ಮತ್ತು ಬಾಬಾ ಸಯ್ಯದ್, ಆರೋಪಿ ಗರ್ಭಿಣಿಯಾಗಿರುವುದು ಹಾಗೂ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಲ್ಲಿ ವಿಳಂಬವಾಗಿದೆ ಎಂಬ ಕಾರಣಗಳನ್ನು ಮುಂದಿಟ್ಟು ನಿರೀಕ್ಷಣಾ ಜಾಮೀನು ಕೋರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries