HEALTH TIPS

ಶಾಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಪ್ರಸ್ತಾವಿಸಿದ UDF ಸರ್ಕಾರ

 ತಿರುವನಂತಪುರಂ: ಕೇರಳದ ಯುಡಿಎಫ್ ಸರ್ಕಾರ ಶಾಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡುವ ಪ್ರಸ್ತಾವವನ್ನು ಮಾಡಿದೆ. 


ಶುಕ್ರವಾರ ನಡೆದ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಸರ್ಕಾರದ ನೀತಿ ಕುರಿತು ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಈ ಪ್ರಸ್ತಾವ ಮಂಡಿಸಲಾಯಿತು.

ಪ್ರಸ್ತಾವಿತ 'ಋತುಚಕ್ರದ ಘನತೆ ಯೋಜನೆ' ಅಡಿಯಲ್ಲಿ ಪ್ರತಿ ತಿಂಗಳು ವಿದ್ಯಾರ್ಥಿನಿಯರಿಗೆ ಮೂರು ದಿನಗಳ ರಜೆ ನೀಡಲು ಉದ್ದೇಶಿಸಲಾಗಿದೆ. ಮುಟ್ಟಿನ ರಜೆಯ ಅವಧಿಯಲ್ಲಿ ತಪ್ಪಿಹೋದ ತರಗತಿಗಳನ್ನು ಸರಿದೂಗಿಸಲು ವಾರಾಂತ್ಯದಲ್ಲಿ (ಶನಿವಾರ ಮತ್ತು ರವಿವಾರ) ವಿಶೇಷ ತರಗತಿಗಳನ್ನು ನಡೆಸಲಾಗುವುದು.

''ವಿದ್ಯಾರ್ಥಿನಿಯರ ರಕ್ಷಣೆಗೆ ನಮ್ಮ ಬದ್ಧತೆಯು ಋತುಚಕ್ರದ ಘನತೆ ಯೋಜನೆಯಲ್ಲಿ ಪ್ರತಿಫಲಿಸುತ್ತದೆ. ಇದರ ಅಡಿಯಲ್ಲಿ ನಾವು ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರಿಗೆ ಪೂರಕ ವಾತಾವರಣ ಇರುವಂತೆ ಮಾಡಲು ಉದ್ದೇಶಿಸಿದ್ದೇವೆ'' ಎಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಮ್ಮ ಭಾಷಣದಲ್ಲಿ ತಿಳಿಸಿದರು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries