HEALTH TIPS

ವಿಮಾನ ಇಂಧನ ಬೆಲೆ ಸ್ಥಿರೀಕರಣಕ್ಕಾಗಿ ತೈಲ ಕಂಪೆನಿಗಳಿಗೆ 10,000 ಕೋಟಿ ರೂಪಾಯಿ ಬಜೆಟ್ ಬೆಂಬಲಕ್ಕೆ ಕೇಂದ್ರ ಅನುಮೋದನೆ

 ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಆರ್ಥಿಕ ಸವಾಲುಗಳನ್ನು ಎದುರಿಸಲು ವಿಮಾನ ಇಂಧನ (ಎಟಿಎಫ್) ಬೆಲೆ ಸ್ಥಿರೀಕರಣಕ್ಕಾಗಿ ತೈಲ ಮಾರುಕಟ್ಟೆ ಕಂಪೆನಿಗಳಿಗೆ 10,000 ಕೋಟಿ ರೂಪಾಯಿ ಮೊತ್ತದ ಒಂದು ಬಾರಿಯ ಬಜೆಟ್ ಬೆಂಬಲವನ್ನು ಕೇಂದ್ರ ಸರ್ಕಾರ ಬುಧವಾರ ಅನುಮೋದಿಸಿದೆ.


ಸರ್ಕಾರದ ಪ್ರಕಾರ, ಬಡ್ಡಿರಹಿತ ಬಜೆಟ್ ಬೆಂಬಲವು ತೈಲ ಮಾರಾಟ ಸಂಸ್ಥೆಗಳಿಗೆ ದೇಶೀಯ ಹಾಗೂ ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ (ವಿಮಾನ ಇಂಧನ) ಬೆಲೆ ಸ್ಥಿರೀಕರಣ ಒದಗಿಸಲು ನೆರವಾಗಲಿದೆ.

ಈ ನಿರ್ಧಾರವನ್ನು ಪ್ರಕಟಿಸಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 2025ರ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದಲೂ ಎಟಿಎಫ್ ಬೆಲೆಗಳು ಏರಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಬಜೆಟ್ ಬೆಂಬಲವು ವಿಮಾನಯಾನ ಸಂಸ್ಥೆಗಳಿಗೆ ನೆರವಾಗಲಿದೆ ಎಂದು ಹೇಳಿದರು.

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮದಿಂದ ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಮಧ್ಯೆ, ಭಾರತೀಯ ವಿಮಾನಯಾನ ಸಂಸ್ಥೆಗಳು ತಮ್ಮ ಅಂತರರಾಷ್ಟ್ರೀಯ ಸೇವೆಗಳನ್ನು ಕಡಿತಗೊಳಿಸುವುದಾಗಿ ಹಾಗೂ ಪ್ರಯಾಣ ದರಗಳನ್ನು ಹೆಚ್ಚಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries