ಕೋಲ್ಕತ್ತ : ಪಶ್ಚಿಮ ಕೋಲ್ಕತ್ತದ ತರಾತಲ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮು ಕುಸಿತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ಕಳೆದ 21 ಗಂಟೆಗಳಿಂದ ರಕ್ಷಣಾ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ.
'ಕಟ್ಟಡದ ಅವಶೇಷಗಳ ಅಡಿಯಿಂದ ಗುರುವಾರ ಬೆಳಿಗ್ಗೆ ಐವರನ್ನು ಹೊರತೆಗೆಯಲಾಗಿದ್ದು, ಇಲ್ಲಿಯವರೆಗೆ 30 ಮಂದಿಯನ್ನು ರಕ್ಷಿಸಲಾಗಿದೆ. ಪ್ರಕರಣದ ಸಂಬಂಧ ಗೋದಾಮು ಮಾಲೀಕ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

