HEALTH TIPS

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ವೈಮಾನಿಕ ದಾಳಿ: ಕನಿಷ್ಠ 13 ಮಂದಿ ಮೃತ್ಯು : ವರದಿ

 ಕಾಬೂಲ್: ಪಾಕಿಸ್ತಾನ ಸೇನೆಯು ಅಫ್ಘಾನಿಸ್ತಾನದ ಮೂರು ಪ್ರಾಂತ್ಯಗಳಲ್ಲಿ ವೈಮಾನಿಕ ದಾಳಿ ನಡೆಸಿದ್ದು, 11 ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಮೃತಪಟ್ಟಿದ್ದಾರೆ ಎಂದು ಡಿeuಣeಡಿs ವರದಿ ಮಾಡಿದೆ.


ಅಫ್ಘಾನಿಸ್ತಾನದ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಈ ಕುರಿತು ದೃಢಪಡಿಸಿದ್ದಾರೆ.

ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಾಗರಿಕರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದೆ. ಘಟನೆಯಲ್ಲಿ 13 ಮಂದಿ ಮೃತಪಟ್ಟು. ಕನಿಷ್ಠ 14 ಜನರು ಗಾಯಗೊಂಡಿದ್ದಾರೆ ಎಂದು ಮುಜಾಹಿದ್ ಹೇಳಿದರು.

ಪಾಕಿಸ್ತಾನಿ ಸೇನೆ ಅಥವಾ ಸರಕಾರ ಈ ಬಗ್ಗೆ ತಕ್ಷಣದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪಾಕಿಸ್ತಾನದ ಭದ್ರತಾ ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರ ಅಡಗುತಾಣಗಳು ಮತ್ತು ಇತರ ಸೌಲಭ್ಯಗಳ ಮೇಲೆ ವಾಯುದಾಳಿಗಳನ್ನು ನಡೆಸಲಾಗಿದೆ ಎಂದು ಡಿeuಣeಡಿs ವರದಿ ಮಾಡಿದೆ.

ಕಾಬೂಲ್ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಮತ್ತು ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಇಸ್ಲಾಮಾಬಾದ್ ಆರೋಪಿಸಿದೆ. ತಾಲಿಬಾನ್ ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಭಯೋತ್ಪಾದನೆ ಪಾಕಿಸ್ತಾನದಲ್ಲಿನ ಆಂತರಿಕ ಸಮಸ್ಯೆಯಾಗಿದೆ ಎಂದು ಹೇಳಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries