HEALTH TIPS

ವಯನಾಡು ಶಾಲೆಯಲ್ಲಿ 150ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; 38 ಮಂದಿ ಆಸ್ಪತ್ರೆಗೆ ದಾಖಲು

 ವಯನಾಡ್ : ಉತ್ತರ ಕೇರಳಂನ ವಯನಾಡ್ ಜಿಲ್ಲೆಯ ಕೊಯಿಲಾಂಡಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 150 ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಮಕ್ಕಳು ಮಾರ್ ಬಸೇಲಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಅವರಲ್ಲಿ ನಿರಂತರ ಅಸ್ವಸ್ಥತೆ ಕಂಡುಬಂದ 38 ಮಕ್ಕಳನ್ನು ಬತ್ತೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ಒಂದು ವಾರ ರಜೆ ಘೋಷಿಸಲಾಗಿದೆ. ಮಕ್ಕಳ ಚಿಕಿತ್ಸೆಗಾಗಿ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಅನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲದೆ, ಶಾಲೆಯ ಶಿಕ್ಷಕರೊಬ್ಬರಿಗೂ ದೈಹಿಕ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಪಂಚಾಯತ್ ಅಧಿಕಾರಿಗಳು, ಮಕ್ಕಳ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ತಿಳಿಸಿದ್ದಾರೆ.

ಜೂನ್ 1ರಿಂದ ಕೆಲವು ಮಕ್ಕಳಲ್ಲಿ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದವು. ಆದರೆ, ಇದಕ್ಕೆ ನಿಖರ ಕಾರಣ ಏನು ಎಂಬುದು ಇದುವರೆಗೆ ದೃಢಪಟ್ಟಿಲ್ಲ ಎಂದು ಅವರು ಹೇಳಿದ್ದಾರೆ.

ಮಕ್ಕಳ ಅಸ್ವಸ್ಥತೆಯ ಹಿಂದಿನ ಕಾರಣ ತಿಳಿಯಲು ಆರೋಗ್ಯ ಇಲಾಖೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.














ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries