HEALTH TIPS

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: 164 ಜನರ ಸಾವು, ಧರೆಗುರುಳಿದ ಕಟ್ಟಡಗಳು

 ಕರಾಕಸ್‌: ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಅವಳಿ ಭೂಕಂಪದಲ್ಲಿ ಕನಿಷ್ಠ 164 ಜನರು ಮೃತಪಟ್ಟಿದ್ದಾರೆ. ರಾಜಧಾನಿ ಕರಾಕಸ್‌ನಲ್ಲಿ ಹಲವು ಬೃಹತ್ ಕಟ್ಟಡಗಳು ನೆಲಸಮಗೊಂಡಿದ್ದು, ಸ್ಥಳೀಯ ನಿವಾಸಿಗಳು ನಾಪತ್ತೆಯಾದ ಸಂಬಂಧಿಕರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. 


1900ರ ನಂತರ ವೆನೆಜುವೆಲಾದಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪ ಇದಾಗಿದೆ. ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣೆಗಾಗಿ ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯರು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಬುಧವಾರ ಸಂಜೆ ರಾಜಧಾನಿಯ ಪಶ್ಚಿಮ ಭಾಗದಲ್ಲಿ 7.2 ಮತ್ತು 7.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿವೆ ವರದಿಯಾಗಿದೆ. ಇದರ ಬೆನ್ನಲ್ಲೇ ಫ್ರಾನ್ಸ್, ಸ್ಪೇನ್ ಮತ್ತು ಅಮೆರಿಕವು ತುರ್ತು ರಕ್ಷಣಾ ಸಿಬ್ಬಂದಿಯನ್ನು ಕಳುಹಿಸಲು ಮುಂದಾಗಿವೆ.

ಇದುವರೆಗೆ 164 ಜನರು ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದು, 970ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರಾಡ್ರಿಗಸ್‌ ತಿಳಿಸಿದ್ದಾರೆ.

ಕರಾವಳಿ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಅನೇಕ ನಿವಾಸಿಗಳು ರಾತ್ರಿಯಿಡೀ ಬೀದಿಗಳಲ್ಲಿ ಕಳೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

1990ರ ಅಕ್ಟೋಬರ್ 29ರಂದು ಕರಾವಳಿಯಲ್ಲಿ 7.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ 7.5ರಷ್ಟು ತೀವ್ರತೆಯ ಭೂಕಂಪವು ವೆನೆಜುವೆಲಾದಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪವಾಗಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries