HEALTH TIPS

ಇರಾನ್-ಅಮೆರಿಕ ಶಾಂತಿ ಒಪ್ಪಂದಕ್ಕೆ ಜೂನ್‌ 19ರಂದು ಸಹಿ: ಡೊನಾಲ್ಡ್ ಟ್ರಂಪ್

 ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಜೂನ್‌ 19ರಂದು ಎರಡೂ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಫೆಬ್ರುವರಿ 28ರಂದು ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ಜಂಟಿ ದಾಳಿ ನಡೆಸಿದ್ದವು. 


ಇದರಿಂದ ಪಶ್ಚಿಮ ಏಷ್ಯಾದಲ್ಲಿ 100ಕ್ಕೂ ಅಧಿಕ ದಿನ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು.

ಇರಾನ್‌ನೊಂದಿಗಿನ ಕದನ ವಿರಾಮ ಮಾತುಕತೆ ಅಂತಿಮವಾಗಿದ್ದು, ಎಲ್ಲರಿಗೂ ಅಭಿನಂದನೆಗಳು. ಈ ಒಪ್ಪಂದಕ್ಕೆ ಸಹಿ ಹಾಕಿದ ತಕ್ಷಣವೇ ಹೊರ್ಮುಜ್ ಜಲಸಂಧಿ ಮುಕ್ತವಾಗಲಿದೆ ಮತ್ತು ಇರಾನ್ ಬಂದರಿನ ಮೇಲೆ ನಾವು ವಿಧಿಸಿರುವ ನೌಕಾ ದಿಗ್ಬಂಧನ ಕೊನೆಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಒಪ್ಪಂದದಿಂದಾಗಿ ಪಶ್ಚಿಮ ಏಷ್ಯಾದ ಭಾಗದಲ್ಲಿ ಶಾಂತಿ ನೆಲೆಸಲಿದೆ. ಈ ಹಿಂದೆ ಅಮೆರಿಕದ ಹಲವು ಅಧ್ಯಕ್ಷರು ಇದಕ್ಕಾಗಿ ಪ್ರಯತ್ನಿಸಿದ್ದರು. ಆದರೆ, ಇದರಲ್ಲಿ ನಾನೊಬ್ಬನೇ ಯಶಸ್ಸು ಕಂಡಿರುವುದು ಎಂದು ಟ್ರಂಪ್ ಹೇಳಿದ್ದಾರೆ.

ಪಾಕ್ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಈ ಒಪ್ಪಂದ ನಡೆದಿದ್ದು, ಜೂನ್‌ 19ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಕೂಡ ಹೇಳಿದ್ದಾರೆ.

ಇರಾನ್‌ನ ಉಪ ವಿದೇಶಾಂಗ ಸಚಿವ ಕಜೆಂ ಘರಿಬಾಬಾದಿ, ಅಮೆರಿಕದೊಂದಿಗಿನ ಒಪ್ಪಂದಕ್ಕೆ ಟೆಹರಾನ್ ಸಹಿ ಹಾಕುವುದನ್ನು ಸ್ಪಷ್ಟಪಡಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries