ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತಿ ಆಯೋಜಿಸಿರುವ "ಮಿಗವ್ 2026" ಯೋಜನೆಯನ್ನು ಇಂದು (ಜೂನ್ 15) ಸೋಮವಾರ ಬೆಳಿಗ್ಗೆ 11 ಗಂಟೆಗೆ ಸ್ಥಳೀಯಾಡಳಿತ ಸಚಿವ ಕೆ.ಎಂ. ಶಾಜಿ ಉದ್ಘಾಟಿಸಲಿದ್ದಾರೆ. ಕಾಸರಗೋಡು ನಗರಸಭೆಯ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ, 2025-26 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ, ಪ್ಲಸ್ ಟು, ವಿ. ಎಚ್.ಎಸ್.ಸಿ ಪರೀಕ್ಷೆಗಳಲ್ಲಿ ಶೇ. 100 ರಷ್ಟು ಯಶಸ್ಸು ಸಾಧಿಸಿದ ಶಾಲೆಗಳು, ಪ್ಲಸ್ ಟು ಪರೀಕ್ಷೆಯಲ್ಲಿ ಪೂರ್ಣ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಮತ್ತು ರಾಜ್ಯದ ಅತ್ಯುತ್ತಮ ವಿದ್ಯಾರ್ಥಿ ಪೋಲೀಸ್ ಕೆಡೆಟ್‍ಗಳಾಗಿ ಆಯ್ಕೆಯಾದ ಕಾಸರಗೋಡು ಜಿಲ್ಲಾ ಎಸ್‍ಪಿಸಿ ಸದಸ್ಯರನ್ನು ಸನ್ಮಾನಿಸಲಾಗುವುದು. ಈ ಸಮಾರಂಭದಲ್ಲಿ ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಜಿಲ್ಲೆಯ ಶಾಸಕರಾದ ಕಲ್ಲಟ್ರ ಮಾಹಿನ್, ಎಕೆಎಂ ಅಶ್ರಫ್, ಕೆ.ನೀಲಕಂಠನ್, ಗೋವಿಂದನ್ ಪಳ್ಳಿಕ್ಕಾಪಿಲ್, ಸಂದೀಪ್ ವಾರಿಯರ್, ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಜಿಲ್ಲಾ ಪೋಲೀಸ್ ಮುಖ್ಯಸ್ಥ ಬಿಪಿ ವಿಜಯ ಭರತ್ ರೆಡ್ಡಿ ಮತ್ತು ಇತರ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

