ನವದೆಹಲಿ: 'ಮೇ 24ರಂದು ನಡೆದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು' ಎಂದು ಕೇಂದ್ರ ಸರ್ಕಾರ ಹೇಳಿದೆ.
'ಯುಪಿಎಸ್‌ಸಿ 2026 ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.
ಇದು ಸುಳ್ಳು' ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೊದ (ಪಿಐಬಿ) ಫ್ಯಾಕ್ಟ್‌ಚೆಕ್ ಘಟಕ ಹೇಳಿದೆ.
ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿರುವ ಮಾಹಿತಿ ಸುಳ್ಳು ಎಂದೂ ಪಿಐಬಿ ಎಕ್ಸ್‌ನಲ್ಲಿ ಪ್ರಕಟಿಸಿದೆ.

