ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರಲ್ ಬಂದರು ಮತ್ತು ಹಡಗುಸಾಗಣೆ ಸಚಿವಾಲಯದ ನಿರ್ದೇಶಕ ಒಪೇಶ್ ಕುಮಾರ್ ಶರ್ಮಾ, 'ಸದ್ಯ ಎಲ್ಲ ಭಾರತೀಯ ನಾವಿಕರೂ ಸುರಕ್ಷಿತವಾಗಿದ್ದಾರೆ. ಅವರ ಸುರಕ್ಷತೆಯನ್ನು ಖಾತರಿಪಡಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ವಿದೇಶದಲ್ಲಿನ ಭಾರತೀಯ ಸಂಸ್ಥೆಗಳು ಹಾಗೂ ರಕ್ಷಣಾ ಸಚಿವಾಲಯದೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇವೆ' ಎಂದು ತಿಳಿಸಿದ್ದಾರೆ.
ಮಡಗಾಸ್ಕರ್ ಧ್ವಜ ಹೊಂದಿದ್ದ ಈ ತೈಲ ಟ್ಯಾಂಕರ್ ಯಾವುದೇ ಸರಕು ಸಾಗಣೆ ಮಾಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಹೀಗಿದ್ದೂ, ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ.
ಬೆಂಕಿಯಿಂದ ಹಡಗಿಗೆ ಉಂಟಾಗಿರುವ ಹಾನಿಯ ಪ್ರಮಾಣ ಹಾಗೂ ಅವಘಡದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಪರಿಸ್ಥಿತಿಯ ಮೇಲೆ ಸಂಬಂಧಿತ ಅಧಿಕಾರಿಗಳು ನಿಗಾ ಇರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

