ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಹಣ ದುರುಪಯೋಗ ನಡೆದಿದೆ ಎಂಬ ಆರೋಪ- ಪ್ರತ್ಯಾರೋಪಗಳು ತೀವ್ರವಾಗಿರುವ ಬೆನ್ನಲ್ಲೇ, ಜೂನ್ 26ರಂದು ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೋಮವಾರ ತಿಳಿಸಿದ್ದಾರೆ.
'ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಯೊಬ್ಬ ಸನಾತನಿಯೂ ತೀವ್ರ ದುಃಖಿತರಾಗಿದ್ದಾರೆ. ನಾನು ದರ್ಶನಕ್ಕಾಗಿ ರಾಮ ದೇವಸ್ಥಾನಕ್ಕೆ ತೆರಳಲಿದ್ದೇನೆ' ಎಂದು ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

